Ad Widget .

ರಾಜ್ಯ ವಿಧಾನಸಭಾ ಚುನಾವಣೆ| ಬಿರುಸಿನಿಂದ ನಡೆಯುತ್ತಿರುವ ಮತದಾನ

ಸಮಗ್ರ ನ್ಯೂಸ್: ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ತಮ್ಮ ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾನ ಚುರುಕುಗೊಂಡಿದ್ದು, ಮತಗಟ್ಟೆಗಳ ಬಳಿ ಪಕ್ಷಗಳ ಕಾರ್ಯಕರ್ತರು ಕೊನೆ ಕ್ಷಣದ ಕಸರತ್ತಾಗಿ ಮತಯಾಚನೆಯಲ್ಲಿ ತೊಡಗಿದ್ದಾರೆ.

Ad Widget . Ad Widget .

ರಾಜ್ಯದಾದ್ಯಂತ ಮತದಾನ ಶಾಂತಿಯುತವಾಗಿ ಸಾಗಿದ್ದು, ಕೆಲವೆಡೆ ಪಕ್ಷಗಳ ಕಾರ್ಯಕರ್ತರ ನಡುವೆ ಸಣ್ಣ ಮಟ್ಟದಲ್ಲಿ ಮಾತಿನ ಚಕಮಕಿ ನಡೆದಿದೆ. ಮಧ್ಯಾಹ್ನದ ಬಳಿಕ ಮಳೆ ಬರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಮತದಾರರು ಬೆಳಿಗ್ಗೆಯಿಂದಲೇ ಕ್ಯೂ ನಿಂತಿದ್ದಾರೆ. ಮಧ್ಯಾಹ್ನದ ಬಳಿಕ ಬಿಸಿಲು ಚುರುಕಾಗಬಹುದು ಎಂಬ ಕಾರಣಕ್ಕೂ ಬೆಳಿಗ್ಗೆಯೇ ಮತ ಚಲಾಯಿಸಲು ಮತದಾರರು ಮುಂದಾಗಿದ್ದಾರೆ.

Ad Widget . Ad Widget .

ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಈ ಬಾರಿ ಮತದಾನದ ಪ್ರಮಾಣ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಮತ ಕೇಂದ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದ್ದು, ಮತದಾನದ ವೇಳೆ ಹಿರಿಯ ನಾಗರಿಕರಿಗೆ ಆದ್ಯತೆ ನೀಡಲಾಗುತ್ತಿದೆ. ಇದೇ ಪ್ರಥಮ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರು ಸಹ ಅತ್ಯುತ್ಸಾಹದಿಂದ ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

Leave a Comment

Your email address will not be published. Required fields are marked *