Ad Widget .

ಮಂಗಳೂರು: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ| ಮಿಥುನ್ ರೈ ಕಾರಿಗೆ ಕಲ್ಲೆಸೆತ

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ಬುಧವಾರ ಶಾಂತಿಯುತ ಮತದಾನ ಪ್ರಕ್ರಿಯೆ ನಡೆದರೂ ಆ ಬಳಿಕ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಸರಕಾರಿ ಹಿ.ಪ್ರಾ.ಶಾಲೆಯ ಮತಗಟ್ಟೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ.

Ad Widget . Ad Widget . Ad Widget . Ad Widget .

ಈ ಘಟನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯ ಕಾರಿಗೆ ಕಲ್ಲೆಸೆದು ಹಾನಿ ಎಸಗಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಸಿಪಿ ಅಂಶುಕುಮಾರ್‌ರ ವಾಹನಕ್ಕೂ ಕಲ್ಲೆಸೆದ ಪರಿಣಾಮ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅದಲ್ಲದೆ ಇಬ್ಬರು ಮಹಿಳೆಯರಿಗೆ ಗಾಯವಾಗಿದೆ ಎನ್ನಲಾಗಿದೆ.

Ad Widget . Ad Widget .

ಬುಧವಾರ ರಾತ್ರಿ ಸುಮಾರು 7:40ರ ವೇಳೆಗೆ ಮೂಡುಬಿದಿರೆ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಮೂಡುಶೆಡ್ಡೆಯ ಮತಗಟ್ಟೆಯ ಬಳಿ ತೆರಳಿ ಕಾರ್ಯಕರ್ತರ ಬಳಿ ಮಾತನಾಡುತ್ತಿದ್ದರು ಎನ್ನಲಾಗಿದೆ.

ಈ ಸಂದರ್ಭ ಬಿಜೆಪಿಗರು ‘ಮೋದಿ ಮೋದಿ’ ಎಂದು ಘೋಷಣೆ ಕೂಗಿದಾಗ, ಮಿಥುನ್ ರೈ ಮತ್ತವರ ಬೆಂಬಲಿಗರು ಕೂಡ ‘ಕಾಂಗ್ರೆಸ್‌ಗೆ ಜೈ’ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಹೊಯ್‌ಕೈ, ಹೊಡೆದಾಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲೆಸೆದಿದ್ದಾರೆ.

ಬಳಿಕ ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಪೊಲೀಸರು ತಕ್ಷಣ ಗುಂಪನ್ನು ಚದುರಿಸಿದ್ದಾರೆ.

Leave a Comment

Your email address will not be published. Required fields are marked *