Ad Widget .

ಮತಗಟ್ಟೆ ಆವರಣದಲ್ಲೇ ಗಂಡು ಮಗುವಿಗೆ ಜನ್ಮನೀಡಿದ ಮಹಿಳೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ನಿಮಿತ್ತ ಮತದಾನ ಮಾಡಲು ಬಂದಿದ್ದ ಗರ್ಭಿಣಿಯೊಬ್ಬರು ಮತಗಟ್ಟೆ ಆವರಣದಲ್ಲೇ ಮಗುವಿಗೆ ಜನ್ಮನೀಡಿದ ಘಟನೆ ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದಲ್ಲಿ ಬುಧವಾರ ನಡೆದಿದೆ.

Ad Widget . Ad Widget .

ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊರ್ಲಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228 ರಲ್ಲಿ ಈ ಘಟನೆ ನಡೆದಿದ್ದು, ಮಣಿಲಾ ಎನ್ನುವವರೇ ಮಗುವಿಗೆ ಜನ್ಮನೀಡಿದ ಮಹಿಳೆಯಾಗಿದ್ದಾಳೆ.

Ad Widget . Ad Widget .

ಗರ್ಭಿಣಿ ಮಣಿಲಾ ಅವರು ಹಕ್ಕು ಚಲಾಯಿಸಲು ಮತಗಟ್ಟೆಗೆ ಬಂದಿದ್ದಾರೆ. ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಪಕ್ಕದಲ್ಲೇ ಇದ್ದ ಕೊಠಡಿಗೆ ಕರೆದುಕೊಂಡು ಹೋಗಿ ಆರೈಕೆ ಮಾಡಲಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಹೆರಿಗೆಯಾದ ಬಳಿಕ ಸಮೀಪದ ಪ್ರಾಥಮಿಕ ಆರೋಗ್ಯಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *