Ad Widget .

ಮಾಜಿ ಸಿಎಂ ಸಿದ್ದರಾಮಯ್ಯ ಓಟ್ ಮಾಡಿದ ಬಳಿಕ ಮಹತ್ವದ ಘೋಷಣೆ

ಸಮಗ್ರ ನ್ಯೂಸ್‌: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Ad Widget . Ad Widget .

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದ ತಮ್ಮ ಸ್ವಂತ ಊರು ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ನಾನು 60% ಕ್ಕಿಂತ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲಿದೆ. ನಾನು ನಿವೃತ್ತಿ ಹೊಂದುವುದಿಲ್ಲ ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *