Ad Widget .

ಆಸ್ಟ್ರೇಲಿಯಾ ಸಂಸತ್ ಸದಸ್ಯರಾಗಿ ಕೊಡಗಿನ ಬೆಡಗಿ ಚರಿಷ್ಮಾ

ಸಮಗ್ರ ನ್ಯೂಸ್:ಮೇ 11, ಭಾರತೀಯ ನಾರಿ ಚರಿಷ್ಮಾ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ನೇಮಕ ಮಾಡಲಾಯಿತು. ಕನ್ನಡತಿಯಾಗಿರುವ ಇವರು ಕೊಡಗು ಮೂಲದವರಾಗಿದ್ದು, ಇವರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೊಡಗಿನ ಚರಿಷ್ಮಾ ಮಾದಪ್ಪ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

Ad Widget . Ad Widget .

ಚರಿಷ್ಮಾ ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕೊಡಗಿನ ಗರಿಮೆಯನ್ನು ವಿದೇಶಿಗರ ಮನ ಮುಟ್ಟುವಂತೆ ಮಾಡಿದರು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ನೇಮಕಗೋಂಡರು. ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ ಮಾದಪ್ಪ ಗುರುತಿಸಿಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *