ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ| 10ಕ್ಕೂ ಹೆಚ್ಚು ಮಂದಿ ಸಾವು

ಸಮಗ್ರ ನ್ಯೂಸ್: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.

Ad Widget ... ..

ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿ ಈ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Ad Widget

ಆದರೆ, ಮೃತರ ಸಂಖ್ಯೆ ನಿರ್ದಿಷ್ಟವಾಗಿ ತಿಳಿದುಬಂದಿಲ್ಲ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಗಾಯಾಳುಗಳ ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *