Ad Widget .

ಸಿದ್ದರಾಮಯ್ಯ ಸಿಎಂ ಆಗಲೆಂದು ದೀರ್ಘ ದಂಡ ನಮಸ್ಕಾರ ಹಾಕಿದ ಅಭಿಮಾನಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಹೊರಬೀಳಲಿದೆ. ಈಗಾಗಲೇ ಸೋಲು ಗೆಲುವಿನ‌ ಲೆಕ್ಕಾಚಾರಗಳು ನಡೆಯುತ್ತಿದ್ದು, ಬೆಳಗಾವಿಯ ಕಾಗವಾಡದಲ್ಲಿ ಸಿದ್ದರಾಮಯ್ಯ ಅಭಿಮಾನಿಯೊಬ್ಬ ದೀರ್ಘದಂಡ ನಮಸ್ಕಾರ ಹಾಕಿದ್ದಾನೆ.

Ad Widget . Ad Widget .

ಮೇ 13 ರಂದು ತಿಳಿಯಲಿರುವ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಿಗಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿ ಹಾಗೂ ಕಾಗವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ರಾಜು ಕಾಗೆ ಅವರು ಜಯಗಳಿಸಲಿ ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಣಮಾಪೂರ ಗ್ರಾಮದ ನಿವಾಸಿಯಾದ ಅಶೋಕ ರೂಗಿ ಅವರು ಹಣಮಾಪೂರ ಕ್ರಾಸ್ ದಿಂದ ಅಮೋಘ ಸಿದ್ದೇಶ್ವರ ದೇವಸ್ಥಾನದ ವರೆಗೆ ದೀರ್ಘ ದಂಡ ನಮಸ್ಕಾರ ಹಾಕಿ ದೇವರಲ್ಲಿ ಹರಕೆ ಹೊತ್ತಿದ್ದಾನೆ.

Ad Widget . Ad Widget .

Leave a Comment

Your email address will not be published. Required fields are marked *