ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ಫಲಿತಾಂಶದ ಬಗ್ಗೆ ಹೇಳಿದ್ದರೆ, ಕಾಂಗ್ರೆಸ್ ಬಿಜೆಪಿ ನಡುವೆ ಸಮಬಲದ ಹೋರಾಟ ನಡೆಯಲಿದೆ ಎಂದು ಹೇಳಿರುವುದು ಮೂಲಕ ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದೆ.
ಫಲಿತಾಂಶಕ್ಕೆ ಮುನ್ನ ಕೋಡಿಮಠ ಶ್ರೀಗಳು ರಾಜ್ಯ ರಾಜಕೀಯದ ಬಗ್ಗೆ ಹೇಳಿದ್ದ ಭವಿಷ್ಯ ಈಗ ಮತ್ತೆ ಚರ್ಚೆಗೆ ಬಂದಿದೆ. ಜನವರಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ್ದ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಜಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರು. ಜೊತೆಗೆ ಈ ಬಾರಿ ಚುನಾವಣೆಯಲ್ಲಿ ಹಲವು ದೊಡ್ಡ ತಲೆಗಳು ಸೋಲು ಕಾಣಲಿವೆ ಎಂದು ಹೇಳಿರುವುದು ತೀವ್ರ ಕುತೂಹಲ ಕೆರಳಿಸಿದೆ.
ರಾಜ್ಯದ ರಾಜಕೀಯದ ಬಗ್ಗೆ ಭವಿಷ್ಯ ನುಡಿದಿದ್ದ ಅವರು, ಕರ್ನಾಟಕದಲ್ಲಿ ರಾಜಕೀಯ ಅಸ್ಥಿರದೆ ಇದೆ, ಚುನಾವಣೆವರೆಗೂ ಪಕ್ಷಾಂತರ ನಡೆಯುತ್ತಲೇ ಇರುತ್ತದೆ, ಎಲ್ಲಾ ಪಕ್ಷಗಳು ಹೊಂದಾಣಿಕೆಯಲ್ಲಿ ಹೋಗುವುದು ಕಷ್ಟ, ಚುನಾವಣೆವರೆಗೂ ಏನು ಹೇಳಲು ಸಾಧ್ಯವಿಲ್ಲ, ಎಲ್ಲ ಛಿದ್ರವಾಗುವ ಸಾಧ್ಯತೆ ಇದೆ, ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರು.