ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿದೆ.
ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯನ್ನ ನಿಯೋಜಿಸಲಾಗಿದೆ. ಹಾಗಾಗಿ ಮತ ಎಣಿಕೆ ಕೇಂದ್ರಗಳ ಬಳಿ 5ಕ್ಕಿಂತಲೂ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಮೆರವಣಿಗೆ, ಸಮಾರಂಭ, ವಿಜಯೋತ್ಸವ, ಸಮಾವೇಶ ನಡೆಸುವಂತಿಲ್ಲ. ನಿನ್ನೆ ರಾತ್ರಿ 10ರಿಂದಲೇ ಇಂದು ಮಧ್ಯರಾತ್ರಿ 12ಗಂಟೆ ವರೆಗೂ ರಾಜ್ಯಾದ್ಯಂತ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.
ಮತ ಎಣಿಕೆ ಕೇಂದ್ರದ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತ ಎಣಿಕೆಗಾಗಿ 317 ಎಆರ್ ಗಳ ನಿಯೋಜನೆ ಮಾಡಲಾಗಿದೆ. 4,256 ಕೌಂಟಿಂಗ್ ಉಸ್ತುವಾರಿಗಳು, 4,256 ಎಣಿಕೆ ಸಹಾಯಕರು, ಮೈಕ್ರೋ ಅಬ್ಸರ್ವರ್ಗಳ ನಿಯೋಜನೆ ಮಾಡಲಾಗಿದೆ.
ಪ್ರತಿ ಎಣಿಕಾ ಕೇಂದ್ರದಲ್ಲಿ ಎಲ್ಲಾ ಕಡೆ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಮತಎಣಿಕೆ ಕೇಂದ್ರದ ಪ್ರವೇಶಕ್ಕೆ ಪ್ರವೇಶ ಪತ್ರ, ಗುರುತಿನ ಚೀಟಿ ಕಡ್ಡಾಯ ಮಾಡಲಾಗಿದೆ. ಮೊಬೈಲ್, ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ.