ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ‌ ಬಂದಿದೆ. ಹಲ್ಲೆಗೊಳಗಾದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ.

Ad Widget ... ..

ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಹಲ್ಲೆ ನಡೆಸಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜೆಪಿಯ ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದ್ದು ಹಲ್ಲೆಗೆ ಒಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ.ಘಟನೆಯ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *