ಭಟ್ಕಳದಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ‌ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ

ಸಮಗ್ರ ನ್ಯೂಸ್: ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ, ಕೇಸರಿ ಧ್ವಜದ ಪಕ್ಕ ಮುಸ್ಲಿಂ ಧ್ವಜ ಹಾರಾಟ ನಡೆಸಲಾಯಿತು. ಇದೀಗ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ.

Ad Widget ... ..

ಉತ್ತರಕನ್ನಡ‌ ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುತ್ತಿದ್ದಂತೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ.

Ad Widget

ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಸುಮಾರು 15 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಟ್ಕಳ ಮೂಡಶಿರಾಲಿಯ ರಾಮಚಂದ್ರ ನಾಯ್ಕ್, ಹಳೇಕೋಟೆ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿದ್ದು, ಇವರ ಪತ್ನಿ, ಮಕ್ಕಳನ್ನು ದೂಡಿ ರಾಮಚಂದ್ರ ನಾಯ್ಕ್ ಹಾಗೂ ಸಂಬಂಧಿಕ ಯುವಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ‌ ನಡೆಸಿದ್ದಾರೆ.

Leave a Comment

Your email address will not be published. Required fields are marked *