ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾಪುವಿನ ಪಾಂಗಾಳದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನ್ಯಾನೊ ಕಾರು ಮತ್ತು ಡಸ್ಟರ್ ಕಾರಿನ ನಡುವೆ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ.

ಕಾರುಗಳು ಢಿಕ್ಕಿಯಾದ ರಭಸಕ್ಕೆ ಎರಡು ಕಾರು ಪಲ್ಟಿ ಹೊಡೆದಿದ್ದು, ನ್ಯಾನೋ ಕಾರಿನಲ್ಲಿದ್ದ ನಾಲ್ವರು ಗಾಯ ಗೊಂಡಿದ್ದಾರೆ. ಡಸ್ಟರ್ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.