ಪಾಕ್ ಪರ ಸ್ಟೇಟಸ್ – ಯುವಕನ ಬಂಧನ

ಸಮಗ್ರ ನ್ಯೂಸ್: ವಿಜಯಪುರದ ಯುವಕನೊಬ್ಬ ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲೀಮ್ ರಾಷ್ಟ್ರ ಎಂದು ಸ್ಟೇಟಸ್ ಹಾಕಿ ಇದೀಗ ಪೊಲೀಸ್ ಅತಿಥಿಯಾಗಿದ್ದಾನೆ.

Ad Widget ... ..

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ ಮುಲ್ಲಾ ಎಂಬಾತ ಇನ್ಸ್ಟಾಗ್ರಾಂನಲ್ಲಿ ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲೀಮ್ ರಾಷ್ಟ್ರ ಎಂದು ಸ್ಟೋರಿ ಹಾಕಿದ್ದ.

Ad Widget

ಇನ್ನು ಇಬ್ರಾಹಿಂ ಮುಲ್ಲಾನ ಇನ್ಸ್ಟಾಗ್ರಾಂ ವೀಕ್ಷಿಸಿದ ಸ್ಥಳೀಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಎಚ್ಚೆತ್ತ ತಾಳಿಕೋಟೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು, ಆರೋಪಿ ಯುವಕನನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *