Ad Widget .

ಉಡುಪಿ: ʻಮೆಸ್ಕಾಂನವರೇ ಕ್ಷಮಿಸಿ ನಮಗೆ ಕರೆಂಟ್‌ ಬಿಲ್‌ ಕೊಡ್ಬೇಡಿ ನಾವು ಕಟ್ಟಲ್ಲʼ ಮೀಟರ್ ಬೋರ್ಡಿನಲ್ಲಿ ಫಲಕ ಅಳವಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆ ಮಾಡಿತ್ತು. ಸದ್ಯ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ನಾವು ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ. ಇದೇ ರೀತಿ ʻಮೆಸ್ಕಾಂನವರೇ ಕ್ಷಮೀಸಿ ನಮಗೆ ಕರೆಂಟ್‌ ಬಿಲ್‌ ಕೊಡ್ಬೇಡಿ ನಾವು ಕಟ್ಟಲ್ಲʼ ಎಂದು ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಎಂಬುವವರು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ.

Ad Widget . Ad Widget .

ಕಾಂಗ್ರೆಸ್ ಸರಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇ. 95 ಜನತೆ ಇದರ ಲಾಭ ಪಡೆಯಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿಕೆಶಿ ಹೇಳಿರುವ ಶೇ. 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲಾ. ನಾನು ತಿಂಗಳಿಗೆ 200 ಯೂನಿಟ್ ಖರ್ಚು ಮಾಡುತ್ತಿಲ್ಲ. ನಾನು ಫಲಾನುಭವಿ ಆಗಿರುವುದರಿಂದ ಮೀಟರ್ ಬೋರ್ಡಿನಲ್ಲಿ ಫಲಕ ಹಾಕಿದ್ದೇನೆ. ನಾನು ಇಲ್ಲದಿರುವಾಗ ಮೆಸ್ಕಾಂನವರು ಬಂದರೆ ಅವರಿಗೆ ಗೊತ್ತಾಗಲಿ ಎಂದು ಬೋರ್ಡ್ ಅಳವಡಿಸಿದ್ದೇನೆ. ನನಗೆ ಮೆಸ್ಕಾಂನವರು ಕರೆಂಟ್ ಬಿಲ್ ಕೊಡಬೇಕಾಗಿಲ್ಲ. ನಾನು ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಎಂದು ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *