Ad Widget .

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ|ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ|ಡಿಕೆಶಿಗೆ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ರೇಸ್​ನಲ್ಲಿ ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಜಯವಾಗಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅಧಿಕೃತವಾಗಿ ಘೋಷಣೆಯಾಗಿದೆ.

Ad Widget . Ad Widget .

ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

Ad Widget . Ad Widget .

ಸಿದ್ದು ನಿವಾಸದಲ್ಲಿ ಬಿಗಿಭದ್ರತೆ
ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೆ ಅವರ ನಿವಾಸದ ಬಳಿ ಪೊಲೀಸರು ಬ್ಯಾರಿಕೇಡ್ ಅಳವಡಿಸುತ್ತಿದ್ದಾರೆ. ಹೆಚ್ಚಿನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನಿವಾಸದ ಬಳಿ ಸೇರುತ್ತಿರುವ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರಿಂದ ಹೆಚ್ಚಿನ ಭದ್ರತೆ ನಿಯೋಜಿಸಲಾಗುತ್ತಿದೆ. ಇನ್ಸ್​ಪೆಕ್ಟರ್​ ಶಿವಸ್ವಾಮಿ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿದೆ.

ಡಿಕೆಶಿಗೆ ಭರವಸೆ: ದೆಹಲಿಯ ಜನ್​ಪತ್​ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್​ ಗಾಂಧಿ ಜತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರು ಮಾತುಕತೆ ನಡೆಸಿದರು. ಈ ವೇಳೆ ಸೋನಿಯಾ ಗಾಂಧಿ ಅವರು ಕೂಡ ದೂರವಾಣಿ ಮೂಲಕ ಡಿಕೆಶಿ ಅವರ ಜೊತೆ ಮಾತನಾಡಿ 2 ವರ್ಷದ ಬಳಿಕ ಅಧಿಕಾರ ಹಸ್ತಾಂತರ ಮಾಡಿ ಮುಖ್ಯಮಂತ್ರಿ ಸ್ಥಾನ ಕೊಡಿಸುವುದಾಗಿ ಮತ್ತು ಡಿಸಿಎಂ ಸ್ಥಾನದ ಜೊತೆಗೆ ಅವರು ಕೇಳುವ ಖಾತೆಗಳನ್ನೇ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *