Ad Widget .

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನೂತನ ಸರಕಾರ ರಚನೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಕ್ಕು ಮಂಡಿಸಿದರು. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಹಕ್ಕು ಮಂಡಿಸಿದ ಸಿದ್ದರಾಮಯ್ಯ, ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಒಪ್ಪಿಸಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯವಾದ ಬೆನ್ನಲ್ಲೇ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ರಾಜ್ಯಪಾಲರ ಬಳಿ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯಪಾಲರ ಭೇಟಿ ವೇಳೆ ಸಿದ್ದರಾಮಯ್ಯ ಅವರಿಗೆ ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್, ಆರ್.ವಿ ದೇಶಪಾಂಡೆ ಸೇರಿದಂತೆ ಪ್ರಮುಖರು ಸಾಥ್ ನೀಡಿದರು. ಕಾಂಗ್ರೆಸ್ ನಿಯೋಗಕ್ಕೆ ರಾಜ್ಯಪಾಲರು ಸಿಹಿ ನೀಡಿ ಸತ್ಕರಿಸಿದರು.

Ad Widget . Ad Widget . Ad Widget .

ಮೇ 20ರ ಶನಿವಾರ ನೂತನ ಸರಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಸಮಯ ಕೊಟ್ಟಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ನೂತನ ಸರಕಾರದ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು, ಹಾಗೂ ಬಿಜೆಪಿಯೇತರ ಪ್ರಮುಖ ರಾಷ್ಟ್ರೀಯ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *