Ad Widget .

ಸುಳ್ಯ: ನಗರ ಪಂಚಾಯತ್ ಮಾಜಿ ಅಧ್ಯಕ್ಷರ ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ|ಬೆಂಗಳೂರಿನಲ್ಲಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ರವರ ಮನೆಗೆ ಮೇ. 3 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರು ಗೋವಿಂದರಾಜನಗರ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

Ad Widget . Ad Widget .

ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಕಳ್ಳತನ ಮಾಡಿದ ಚಿನ್ನವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ, ಸಂಶಯಗೊಂಡ ಚಿನ್ನದಂಗಡಿಯವರು ಪೋಲೀಸರಿಗೆ ಮಾಹಿತಿ ನೀಡಿದರೆನ್ನಲಾಗಿದೆ. ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಮೈಸೂರಿನ ಇಬ್ಬರು ವ್ಯಕ್ತಿಗಳ ಹೆಸರು ಹೇಳಿದ. ಪೋಲೀಸರು ಆ ಇಬ್ಬರನ್ನು ಪತ್ತೆಹಚ್ಚಿ ಹಿಡಿದು ವಿಚಾರಿಸಿದಾಗ ಸುಳ್ಯದಲ್ಲಿ ಕಳವು ನಡೆಸಿರುವುದನ್ನು ಒಪ್ಪಿಕೊಂಡರೆಂದು ತಿಳಿದು ಬಂದಿದೆ.

Ad Widget . Ad Widget .

ಕದ್ದ ಚಿನ್ನಾಭರಣಗಳಲ್ಲಿ ಕೆಲವನ್ನು ಅವರು ಮಾರಾಟ ಮಾಡಿದ್ದು ಪೋಲೀಸರು ಅದನ್ನು ವಶವಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.

ಘಟನೆಯ ವಿವರ:
ಅರಂಬೂರಿನಲ್ಲಿರುವ ಎಸ್.ಸಂಶುದ್ದೀನ್ ರವರ ಮನೆಗೆ ಮೇ 3ರಂದು ರಾತ್ರಿ ಕಳ್ಳರು‌ ನುಗ್ಗಿ‌ ಸುಮಾರು ರೂ‌. 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಒಂದು ರಿವಾಲ್ವರ್ ಕಳವುಗೈದಿದ್ದರು.‌

ಸಂಶುದ್ದೀನ್ ಅವರು ತಮ್ಮ ಕುಟುಂಬದೊಂದಿಗೆ ಮಂಗಳೂರಿಗೆ ಹೋಗಿದ್ದಾಗ ಈ ಕೃತ್ಯ ನಡೆದಿತ್ತು. ಅವರು ಸುಳ್ಯ ಪೋಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಅವರ ಮನೆಯಿಂದ ಬೆಲೆಬಾಳುವ 14 ಬ್ರಾಂಡೆಡ್ ವಾಚ್, 20 ಚಿನ್ನದ ಉಂಗುರ, 3 ಪೆಂಡೆಂಡ್, ಡೈಮಂಡ್ ಬ್ರಾಸ್ಲೈಟ್ 2, ಡೈಮಂಡ್ ಸರ 1, ರೂ‌ 55,000 ನಗದು‌ ಹಾಗೂ ಒಂದು ರಿವಾಲ್ವರ್ ಸೇರಿ ಒಟ್ಟು ರೂ. 20 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳ್ಳರು ಕದ್ದಿದ್ದರು. ಇದೀಗ ಕಳ್ಳರು ಪೋಲೀಸರ ಅತಿಥಿಯಾಗಿದ್ದಾರೆ.

Leave a Comment

Your email address will not be published. Required fields are marked *