ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ ಎರಡೇ ದಿವಸದಲ್ಲಿ ಹೀಗಾದರೆ ಮುಂದಿನ ಐದು ವರ್ಷದಲ್ಲಿ ನಮ್ಮ ಯುವಕರು ಪರಿಸ್ಥಿತಿ ಏನಾಗಬಹುದು ಎಂಬುದು ಚಿಂತೆಯಾಗಿದೆ. ಹಿಂದುಗಳ ಪರವಾಗಿ ವಿಧಾನಸೌಧದಲ್ಲಿ ಧ್ವನಿ ಎತ್ತಲು ನಾನು ಸಿದ್ಧಳಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಘಟನೆಯ ಬಗ್ಗೆ ಅವರು ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಂದ ಮಾಹಿತಿ ಪಡೆದರು.
ಈ ವೇಳೆ ಸುಳ್ಯದ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಇಂದಿರಾ ಬಿ.ಕೆ ಬಂಬಿಲ, ಸುಳ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಸುನೀಲ್ ಕೇರ್ಪಳ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಹೇಶ್ ರೈ ಮೇನಾಲ, ಸುಳ್ಯ ನಗರಸಭಾ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿ.ಪಂ. ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮತ್ತಿತರರು ಅವರೊಂದಿಗಿದ್ದರು.