ಸಮಗ್ರ ನ್ಯೂಸ್: ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.
ಇಂದು ಕೇವಲ 8 ಶಾಸಕರು ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾಗಿ ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಹಾಗೂ ರಾಮಲಿಂಗ ರೆಡ್ಡಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.