Ad Widget .

ಅವರಿವರಂತೆ ಗ್ಯಾರಂಟಿ ಬಗ್ಗೆ ನಾನು ಟೀಕೆ ಮಾಡಲ್ಲ – ಯಡಿಯೂರಪ್ಪ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಗ್ಯಾರಂಟಿ ಜಾರಿ ಬಗ್ಗೆ ನನಗೆ ಗ್ಯಾರಂಟಿ ಇದೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಭರವಸೆಗಳು ನಮ್ಮ ಹಿನ್ನಡೆಗೆ ಬಹುಮುಖ್ಯ ಕಾರಣವಾಗಿದೆ. ಅವರು ಅದನ್ನು ಅನುಷ್ಠಾನಕ್ಕೆ ತರಲಿ. ಒಟ್ಟಾರೆಯಾಗಿ ಜನರಿಗೆ ಒಳ್ಳೆಯದಾಗಲಿ ಯಡಿಯೂರಪ್ಪ ಹೇಳಿದರು.

Ad Widget . Ad Widget .

ಕಾಂಗ್ರೆಸ್‌ನವರ ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಅನಗತ್ಯವಾಗಿ ಟೀಕೆ ಮಾಡಲು ಹೋಗುವುದಿಲ್ಲ. ಬೇರೆಯವರು ಮಾತನಾಡಿದಂತೆ ನಾನು ಮಾತನಾಡಲ್ಲ ಎಂದು ಬಿ.ಎಸ್.‌ ಯಡಿಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ.

Ad Widget . Ad Widget .

ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಮಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್‌ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿ.ಎಸ್‌. ಯಡಿಯೂರಪ್ಪ, ಅವರು ರೀತಿಯ ಹೇಳಿಕೆ ಕೊಟ್ಟಿರೋದು ಸ್ವಾಭಾವಿಕವಾಗಿದೆ. ಇಂಥ ಹೇಳಿಕೆಗಳ ಬಗ್ಗೆ ನಾವು ಚಿಂತೆ ಮಾಡುವುದಿಲ್ಲ. ಯಾವುದೇ ಹಗರಣ ಇದ್ದರೂ ತನಿಖೆ ಮಾಡಲಿ, ನಾವು ಚಿಂತೆ ಮಾಡಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.

Leave a Comment

Your email address will not be published. Required fields are marked *