ಸುಳ್ಯ: ಸಿದ್ದರಾಮಯ್ಯ ಅಭಿನಂದನಾ ಬ್ಯಾನರ್ ಹರಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ಕರ್ನಾಟಕದ ನೂತನ ಸಿಎಂ ಆಗಿ ಪದಗ್ರಹಣ ವಹಿಸಿಕೊಂಡ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿ ಹಾಕಲಾಗಿದ್ದ ಬ್ಯಾನರ್ ಅನ್ನು ಹರಿದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆಯಲ್ಲಿ ನಡೆದಿದೆ.

Ad Widget ... ..

ಇಲ್ಲಿನ ಬಸ್ ತಂಗುದಾಣ ಪಕ್ಕ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ಅನ್ನು ಅವರ ಅಭಿಮಾನಿ ಬಳಗಿದಂದ ಅಳವಡಿಸಲಾಗಿತ್ತು. ಶನಿವಾರ ರಾತ್ರಿ ಈ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *