Ad Widget .

ಸುಳ್ಯ; ಬೈಕ್ ಅಪಘಾತ ಓರ್ವ ಮೃತ್ಯು

ಸಮಗ್ರ ನೂಸ್: ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ಮೇ.22 ರಂದು ಸಂಭವಿಸಿದೆ.
ಮೃತಪಟ್ಟಾತ ಕೆವಿಜಿ ಆಯುರ್ವೇದ ಕಾಲೇಜು ವಿಧ್ಯಾರ್ಥಿ ಸ್ವರೂಪ್(22) ಎಂದು ಗುರುತಿಸಲಾಗಿದೆ.

Ad Widget . Ad Widget .

ಈತ ಬೈಕ್ ನಲ್ಲಿ ತೆರಳುತ್ತಿದ್ದು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಎನ್ನಲಾಗಿದೆ. ಈ ವೇಳೆ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Ad Widget . Ad Widget .

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಮತ್ತು ‌ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ ಕೆವಿಜಿ ಆಯುರ್ವೇದ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್(22) ಎಂಬವರು ಸ್ಥಳದಲ್ಲೇ ಮೃತಪಟ್ಟರು.

ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ ಗಾಯಗಳಾಗಿದ್ದು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1 thought on “ಸುಳ್ಯ; ಬೈಕ್ ಅಪಘಾತ ಓರ್ವ ಮೃತ್ಯು”

  1. Dear bike riders, plz take care of yourself. Wear helmet, maintain the average speed, Be careful while overtaking.

Leave a Comment

Your email address will not be published. Required fields are marked *