ಕಾಗವಾಡ:ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಅಪಘಾತವಾಗಿ ಕಾರು ನಜ್ಜುಗುಜ್ಜಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ಹೊರವಲಯದಲ್ಲಿರುವ ಬಿಡ್ಜ ಬಳಿ ನಡೆದಿದೆ.

Ad Widget ... ..

ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜನರಿಗೆ ಗಂಭಿರ ಗಾಯಗಳಾಗಿದ್ದು ಎರಡು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರ ರಾಜ್ಯದ ಮಿರಜ್ ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Ad Widget

ಬಸ್ ಮಹಾರಾಷ್ಟ್ರ ರಾಜ್ಯದ ಕೋಲ್ಲಾಪುರದಿಂದ ಇಳಕಲ್ ಕಡೆಗೆ ಸಂಚುರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪೊಲಿಸರು ಸ್ಥಳಕ್ಕೆ ಭೇಟಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *