ಸಮಗ್ರ ನ್ಯೂಸ್: ಮೇ 22, ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ನಡೆದಿದೆ.
ಶೇಖಮಲೆಯ ಜಾರತ್ತಾರು ನಿವಾಸಿ ಆನಂದ ರವರ ಪುತ್ರ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಇಂದು ಮಧ್ಯಾಹ್ನ ಮನೆಯ ಪಕ್ಕದಲ್ಲಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾನೆ.
ಈತ ಪುತ್ತೂರಿನ ಜಿಡೆಕಲ್ಲು ಸರಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಕಾಲೇಜಿನ ಸಹಪಾಠಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ಅವನ ಸ್ನೇಹಿತರಿಂದ ತಿಳಿದು ಬಂದಿದೆ.
ಹದಿನೆಂಟರ ಹರೆಯದ ರಿತೇಶ್ ಗೆ ಮನೆಯಲ್ಲಿ ಯಾವುದೇ ತೊಂದರೆಯಾಗಿರುವುದಿಲ್ಲ ಎಂದು ತಿಳಿದು ಬಂದಿದು. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನು ಸ್ಪಷ್ಟ ಮಾಹಿತಿ ಕಂಡಬಂದಿಲ್ಲ.

















