ರಾ.ಸ್ವ.ಸೇ ಸಂಘದ ಹಿರಿಯ ಕೊಂಡಿ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

Ad Widget ... ..

ಸದಾ ನಗುಮುಖ ಗಂಭೀರ ವ್ಯಕ್ತಿತ್ವ, ನೇರ ನಡೆ ನುಡಿಯವರಾಗಿದ್ದ ಕಾಂತಪ್ಪ ಶೆಟ್ಟಿಯವರು ಹೃದಯ ವೈಶಾಲ್ಯತೆಯುಳ್ಳವರಾಗಿದ್ದರು. ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾಪಕ್ಷದಲ್ಲು ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ ಬಳಿಕ ರಾಜಕಾರಣದಿಂದ ದೂರ ಇದ್ದು,ರಾ.ಸ್ವ.ಸೇ. ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Leave a Comment

Your email address will not be published. Required fields are marked *