ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ದಾಖಲಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ದೂರು ಸ್ವೀಕರಿಸಿದ ಬೆಳ್ತಂಗಡಿ ಠಾಣಾ ಪೊಲೀಸರು ಕಾನೂನು ಕ್ರಮದ ಭರವಸೆ ನೀಡಿದ್ದಾರೆ.