Ad Widget .

ಉಪ್ಪಿನಂಗಡಿ: ವಿದ್ಯುತ್ ಶಾಕ್ ಗೆ ಕಾಲೇಜು ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ವಿದ್ಯಾರ್ಥಿ.

Ad Widget . Ad Widget .

ಯುವಕ ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಘಟನೆಯ ಬಗ್ಗೆ ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

Ad Widget . Ad Widget .

ದೂರಿನಲ್ಲಿ ಸಾರ್ವಜನಿಕರ ಮೂಲಕ ನನ್ನ ತಂಗಿಯ ಮಗನಿಗೆ ಶರೀಪುದ್ದೀನ್ ಗೆ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿಧ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಸ್ಥಳೀಯರು ಅವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಪುತ್ತೂರು ಸರಕಾರಿ ಆಸ್ಪತ್ರೆಗೆ ತೆರಳಿ ನೋಡಿದಾಗ ಮೃತಪಟ್ಟಿದ್ದು ಆತನ ಎದೆಯ ಭಾಗದಲ್ಲಿ ವಿಧ್ಯುತ್ ಸ್ಪರ್ಶ ಆಗಿರುವುದು ಕಂಡು ಬಂದಿದೆ ಎಂದು ದೂರಿನಲ್ಲಿ‌ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಯುಡಿಆರ್ ನಂಬ್ರ 27/2023 ಕಲಂ:174 CRPC ಯಂತೆ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *