Ad Widget .

ಪುತ್ತೂರು: ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್| ಗಂಭೀರ ಸ್ವರೂಪ ಪಡೆದ ಪ್ರಕರಣ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಸುದ್ದಿ ಮಾಡಿದ ಪುತ್ತೂರು ಹಿಂದೂ ಕಾರ್ಯಕರ್ತರ ಮೇಲೆ ಪೋಲೀಸರ ದೌರ್ಜನ್ಯಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದ್ದು, ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆ ಹರಿದು ಹೋಗಿದ್ದಾಗಿ ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ ಉಲ್ಲೇಖಗೊಂಡಿದೆ. ಇದರಿಂದ ಪ್ರಕರಣ ಮತ್ತಷ್ಟು ಗಂಭೀರತೆಯನ್ನು ಪಡೆದುಕೊಂಡಿದೆ.

Ad Widget . Ad Widget .

ವಿಷಯ ತಿಳಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿ ಭೇಟಿಯಾಗಿ ಡಿವೈಎಸ್ಪಿಯನ್ನು ಅಮಾನತುಗೊಳಿಸಿ ಐದು ಲಕ್ಷ ಪರಿಹಾರ ನೀಡದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ.

Ad Widget . Ad Widget .

ಬಿಜೆಪಿ ನಾಯಕರಾದ ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದ ಗೌಡರ ಫೋಟೋಗಳಿಗೆ ಚಪ್ಪಲಿ ಹಾರ ಹಾಕಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 11 ರಷ್ಟು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.

ಪೊಲೀಸರು ಕಸ್ಟಡಿಯಲ್ಲಿ ಆರೋಪಿಗಳಿಗೆ ಗಂಭೀರ ಮಟ್ಟದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇತ್ತೀಚಿಗೆ ಈ ವಿಚಾರ ರಾಜ್ಯ ಮಟ್ಟದಲ್ಲೇ ಬಾರೀ ಸುದ್ದಿ ಮಾಡಿತ್ತು.
ಇದೀಗ ಆರೋಪಿಯ ಬಗ್ಗೆ ವೈದ್ಯಕೀಯ ರಿಪೋರ್ಟ್ ಈ ರೀತಿಯಾಗಿ‌ ಹೊರಬಂದಿದ್ದು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

Leave a Comment

Your email address will not be published. Required fields are marked *