Ad Widget .

ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Ad Widget . Ad Widget .

ಸಂಜೆ 6:30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ.

Ad Widget . Ad Widget .

ಮಧು ಬಂಗಾರಪ್ಪ, ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಎಂ. ಕೃಷ್ಣಪ್ಪ, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ, ಶಿವರಾಜ್ ತಂಗಡಗಿ, ಕೆ.ಎನ್. ರಾಜಣ್ಣ, ಬಸವರಾಜ ರಾಯರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ರಾಘವೇಂದ್ರ ಹಿಟ್ನಾಳ್, ಹೆಚ್‌.ಕೆ. ಪಾಟೀಲ್, ರಹೀಮ್ ಖಾನ್, ಜಿ.ಎಸ್. ಪಾಟೀಲ್, ಹೆಚ್.ಸಿ. ಮಹದೇವಪ್ಪ, ನರೇಂದ್ರಸ್ವಾಮಿ, ಚೆಲುವರಾಯಸ್ವಾಮಿ, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಸಂತೋಷ್ ಲಾಡ್, ವಿನಯ ಕುಲಕರ್ಣಿ, ಸಲೀಂ ಅಹಮದ್ ಮೊದಲಾದವರ ಹೆಸರುಗಳು ಸಂಭವನೀಯ ಸಚಿವರ ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *