ಸಮಗ್ರ ನ್ಯೂಸ್: ಕೃಷಿ ಪಂಪ್‌ಸೆಟ್‌ಗಳ ಆರ್.ಆರ್. ನಂಬರ್ ಅನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡುವಂತೆ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಸರ್ಕಾರಕ್ಕೆ ಸೂಚಿಸಿದೆ. ಈ ಸೂಚನೆಯಿಂದ ಮುಂಬರುವ ದಿನಗಳಲ್ಲಿ ಮೀಟರ್ ಅಳವಡಿಕೆಯ ಸಾಧ್ಯತೆಯ ಮೊದಲ ಹಂತ ಎಂಬುದು ರೈತರ ಆತಂಕಕ್ಕೆ ಕಾರಣವಾಗಿದೆ
ಸದ್ಯಕ್ಕೆ ಯಾವುದೇ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಇಲ್ಲ. ಎಷ್ಟು ಪ್ರಮಾಣದ ವಿದ್ಯುತ್ ಪೂರೈಕೆ ಆಗುತ್ತಿದೆ ಎಂಬ ನಿಖರ ಲೆಕ್ಕವೂ ಇಲ್ಲ. ಆದರೆ ದಶಕ ಗಳಿಂದ ಒಟ್ಟಾರೆ ಬಳಕೆಯ ಶೇ.34ರಷ್ಟು ವಿದ್ಯುತ್ ಪಂಪ್‌ಸೆಟ್‌ಗಳಿಗೆ ಹೋಗುತ್ತಿದೆ.
ಈಗ ಅದರ ಲೆಕ್ಕಹಾಕಿ ಆರು ತಿಂಗಳಲ್ಲಿ ಜೋಡಣೆ ಮಾಡತಕ್ಕದ್ದು. ಇಲ್ಲದಿದ್ದರೆ ಅಂತಹ ಗ್ರಾಹಕರಿಗೆ ಸಹಾಯಧನ ಬಿಡುಗಡೆ ಮಾಡಬಾರದು ಎಂದು ಸೂಚಿಸಲಾಗಿದೆ. ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚು ಸಂಪರ್ಕ ಹೊಂದಿದವರೇ ಹೆಚ್ಚಿದ್ದು, ಇದು ನೇರವಾಗಿ ಆ ವರ್ಗವನ್ನೇ ಗುರಿ ಮಾಡಿದಂತಿದೆ.