Ad Widget .

ವಿಧಾನಸಭೆ ಸ್ಪೀಕರ್ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Ad Widget . Ad Widget .

ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Ad Widget . Ad Widget .

ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು. ಬಳಿಕ ಖಾದರ್ ಆಯ್ಕೆಯನ್ನು ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಸದನದಲ್ಲಿ ಪ್ರಕಟಿಸಿದರು.

ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತು ಖಾದರ್ ಕಾರ್ಯಾರಂಭ ಮಾಡಿದರು. ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲ ಪಕ್ಷದ ನಾಯಕರು ಅಭಿನಂದಿಸಿ ಶುಭ ಕೋರಿದರು.

Leave a Comment

Your email address will not be published. Required fields are marked *