ಸಮಗ್ರ ನ್ಯೂಸ್: ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಚೌಡೇಶ್ವರಿ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಚೌಡೇಶ್ವರಿ ನಗರದ ಹಳ್ಳಿ ರುಚಿ ಬಳಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನೇ ಕೊಲೆಯಾದ ದುರ್ದೈವಿ.
ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ರವಿ ಹತ್ಯೆಗೂ ಮುನ್ನ ಏರಿಯಾಗಳಲ್ಲಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ್ದಾರೆ. ಬಳಿಕ ರವಿಯನ್ನು ಸಿಎಂಹೆಚ್ ಬಾರ್ ನಿಂದ ಅಟ್ಟಾಡಿಸಿಕೊಂಡು ಬಂದು ಹಳ್ಳಿ ರುಚಿ ಹೋಟೆಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.