ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು| ವ್ಯಕ್ತಿಯ ಪತ್ತೆಗೆ ಕೋರಿಕೆ

ಸಮಗ್ರ ನ್ಯೂಸ್: ಇಲ್ಲಿನ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆ ಬಸ್ ನಿಲ್ದಾಣದ ಸಮೀಪ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯನ್ನು ಮೇ.10 ರಂದು ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಒಳರೋಗಿಯಾಗಿ ದಾಖಲಿಸಲಾಗಿದ್ದು ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget ... ..

ವ್ಯಕ್ತಿಯು ಸುಮಾರು 70 ರಿಂದ 75 ವರ್ಷದವವರಾಗಿದ್ದು ಎತ್ತರ 6.2 ಅಡಿ, ಸಾಧರಣ ಮೈಕಟ್ಟು, ಕೋಲು ಮುಖ, ಗೋಧಿ ಮೈ ಬಣ್ಣ ಹೊಂದಿದ್ದು, ನೀಲಿ ಬಣ್ಣದ ಅರ್ಧ ತುಂಡರಿಸಿದ ಪ್ಯಾಂಟ್ ಧರಿಸಿದ್ದಾರೆ. ಈ ವ್ಯಕ್ತಿಯ ಸಂಬಧಿಕರು ಇದ್ದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ದೂ.ಸಂಖ್ಯೆ:0824-2220518, ಪೊಲೀಸ್ ನಿರೀಕ್ಷಕರು-9480805339 ಹಾಗೂ ದಕ್ಷಿಣ ಪೊಲೀಸ್ ಠಾಣೆ ದೂ.ಸಂಖ್ಯೆ– 7975895368 ಕರೆ ಮಾಡಿ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *