Ad Widget .

ಕಡಬ: ಕುದ್ಮಾರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೋರ್ವರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

Ad Widget . Ad Widget .

ಆಲಂಕಾರು ಮೂರ್ತೆದಾರರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಪೂಜಾರಿ ಆಲಂಕಾರು ಎಂಬವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.

Ad Widget . Ad Widget .

ಸದ್ಯ ಸ್ಥಳದಲ್ಲಿ ನೂರಾರು ಜನರು ಸೇರಿದ್ದು,ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ. ಚಂದ್ರಶೇಖರ ಅವರು ಇಂದು ಮುಂಜಾನೆ ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿದ್ದು ನಂತರ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸದ್ಯ ಮೃತದೇಹವನ್ನು ಮೇಲೆತ್ತಲಾಗಿದ್ದು, ಕಡಬದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಮೃತರು ಒಬ್ಬ ಧಾರ್ಮಿಕ ಮುಂದಾಳುವಾಗಿದ್ದು, ಬಿಲ್ಲವ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಯಕ್ಷಗಾನ ತಾಳಮದ್ದಲೆಗಳಲ್ಲಿ ಅರ್ಥಧಾರಿಯಾಗಿದ್ದು, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *