Ad Widget .

ನೂತನ ಸಂಸತ್ ಭವನವನ್ನು ರಾಷ್ಟ್ರಪತಿ ಯಾಕೆ‌ ಉದ್ಘಾಟಿಸಬಾರದು? ಕೇಂದ್ರದ ವಿರುದ್ಧ ಸುಪ್ರೀಂ ನಲ್ಲಿ ಪಿಐಎಲ್ ಸಲ್ಲಿಕೆ

ಸಮಗ್ರ ನ್ಯೂಸ್: ಮೇ 28ರಂದು ಹೊಸ ಸಂಸತ್ ಭವನ ಲೋಕಾರ್ಪಣೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎರಡು ದಿನಕ್ಕೂ ಮುನ್ನ (ಗುರುವಾರ) ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಭಾರತದ ರಾಷ್ಟ್ರಪತಿಗಳಿಂದಲೇ ನೂತನ ಸಂಸತ್ ಭವನ ಉದ್ಘಾಟಿಸುವಂತೆ ಲೋಕಸಭೆ ಸಚಿವಾಲಯ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ.

Ad Widget . Ad Widget . Ad Widget .

ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡಿಸದೆ, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅವಮಾನ ಎಂದು ವಕೀಲ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುತ್ತದೆ. ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುವುದರಿಂದ ಅವರಿಂದಲೇ ಲೋಕಾರ್ಪಣೆ ಮಾಡಬೇಕೆಂದು ಮನವಿ ಮಾಡಲಾಗಿದೆ.

ರಾಷ್ಟ್ರಪತಿ ಸಂಸತ್ತಿನ ಅವಿಭಾಜ್ಯ ಅಂಗ. ಕಟ್ಟಡದ ಶಿಲಾನ್ಯಾಸ ಸಮಾರಂಭದಿಂದಲೂ ರಾಷ್ಟ್ರಪತಿಯನ್ನು ದೂರವಿಟ್ಟಿದ್ದೇಕೆ? ಇದೀಗ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲ. ಕೇಂದ್ರ ಸರಕಾರದ ಈ ನಿರ್ಧಾರ ಸರಿಯಲ್ಲ ಎಂದು ದೂರಲಾಗಿದೆ. ಲೋಕಸಭಾ ಸಚಿವಾಲಯ, ಗೃಹ ಸಚಿವಾಲಯ, ಕಾನೂನು ಸಚಿವಾಲಯಗಳನ್ನು ಅರ್ಜಿದಾರರು ಈ ಪ್ರಕರಣದಲ್ಲಿ ಎದುರಾಳಿ ಕಕ್ಷಿದಾರರನ್ನಾಗಿ ಮಾಡಿದ್ದಾರೆ.

Leave a Comment

Your email address will not be published. Required fields are marked *