Ad Widget .

“ನಿಮ್ಮ ಮನವಿಯನ್ನು ಆಲಿಸಲಾಗದು”| ಸಂಸತ್ ಉದ್ಘಾಟನೆ ಕುರಿತ ಪಿಐಎಲ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಭಾರತದ ಪ್ರಥಮ ಪ್ರಜೆ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆಯ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

Ad Widget . Ad Widget .

“ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ, ಇದನ್ನು ಪರಿಗಣಿಸಲು ನಾವು ಒಲವು ತೋರುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. “ನಾವು ನಿಮ್ಮ ಮೇಲೆ ವೆಚ್ಚವನ್ನು ಹೇರುತ್ತಿಲ್ಲ ಎಂಬುದಕ್ಕೆ ಕೃತಜ್ಞರಾಗಿರಿ” ಎಂದು ಪೀಠವು ಹೇಳಿದೆ.

Ad Widget . Ad Widget .

ನ್ಯಾಯವಾದಿ ಜಯ ಸುಕಿನ್‌ ಎಂಬುವರು ಈ ಬಗ್ಗೆ ದಾವೆ ಹೂಡಿದ್ದರು. ಮೇ 18ರಂದು ಲೋಕಸಭೆಯ ಸೆಕ್ರೆಟರಿ ಜನರಲ್‌ ಬಿಡುಗಡೆ ಮಾಡಿರುವ ಆಹ್ವಾನ ಪತ್ರಿಕೆ ದೇಶದ ಸಂವಿಧಾನವನ್ನು ಉಲ್ಲಂಘಿಸುತ್ತಿದೆ. ರಾಷ್ಟ್ರಪತಿ ದೇಶದ ಪ್ರಥಮ ಪ್ರಜೆ ಮತ್ತು ಅವರು ಸಂಸತ್‌ ನ ಮುಖ್ಯಸ್ಥರು. ದೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ನಿರ್ಧಾರಗಳನ್ನು ರಾಷ್ಟ್ರಪತಿಗಳ ಹೆಸರಿನಲ್ಲಿಯೇ ಕೈಗೊಳ್ಳಲಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಸಂವಿಧಾನದ 79ನೇ ವಿಧಿಯ ಅನ್ವಯ ರಾಷ್ಟ್ರಪತಿಗಳು ಸಂಸತ್‌ನ ಅವಿಭಾಜ್ಯ ಅಂಗ. ಹೀಗಾಗಿ ಉದ್ಘಾಟನಾ ಕಾರ್ಯಕ್ರಮದಿಂದ ಅವರನ್ನು ದೂರ ಇರಿಸುವಂತೆ ಇಲ್ಲ. ಈ ಹಿನ್ನೆಲೆಯಲ್ಲಿ ಲೋಕಸಭೆಯ ಕಾರ್ಯಾಲಯಕ್ಕೆ ಹೊಸ ಸಂಸತ್‌ ಭವನವನ್ನು ರಾಷ್ಟ್ರಪತಿಗಳಿಂದ ನಡೆಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು. 20 ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧಾರ ಮಾಡಿರುವಂತೆಯೇ ಈ ಬೆಳವಣಿಗೆ ನಡೆದಿದೆ.

Leave a Comment

Your email address will not be published. Required fields are marked *