ಕೊಡಗು: ಈ ವರ್ಷವೂ ತಪ್ಪದ ಜಲಪ್ರಳಯ ಭೀತಿ| ಸರ್ಕಾರಕ್ಕೆ ವರದಿ ಸಲ್ಲಿಸಿದ ಜಿಲ್ಲಾಡಳಿತ| 765 ಕುಟುಂಬಗಳ ಸ್ಥಳಾಂತರಕ್ಕೆ ಚಿಂತನೆ

ಸಮಗ್ರ ನ್ಯೂಸ್: ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರಾಕೃತಿಕ ವಿಕೋಪಕ್ಕೆ ಕೊಡಗು ತತ್ತರಿಸಿದೆ. ಹೀಗಿರುವಾಗಲೇ ಕೊಡಗು ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ವತಃ ಜಿಲ್ಲಾಡಳಿತವೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

Ad Widget ... ..

ಜಲಪ್ರಳಯ ಭೀತಿ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ 765 ಕುಟುಂಬಗಳ 2681 ಜನರನ್ನು ಸ್ಥಳಾಂತರಿಸಬೇಕಾಗಿದೆ.

Ad Widget

ಅದಕ್ಕಾಗಿ 26 ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಸೋಮವಾರಪೇಟೆ ತಾಲೂಕಿನಲ್ಲಿ 1143 ಕುಟುಂಬಗಳ 4162 ಜನರನ್ನು ಸ್ಥಳಾಂತರಿಸಬೇಕಾಗಿದ್ದು, 30 ಕಾಳಜಿ ಕೇಂದ್ರಗಳನ್ನು ತೆರೆಯಬೇಕಾಗಬಹುದು. ಜೊತೆಗೆ ವಿರಾಜಪೇಟೆ ತಾಲೂಕಿನಲ್ಲಿ 582 ಕುಟುಂಬಗಳ 2049 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಬೇಕಾಗಿದ್ದು 26 ಕಾಳಜಿ ಕೇಂದ್ರಗಳನ್ನು ತೆರೆಯಬೇಕಾಗಬಹುದು ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಇನ್ನು ‌ಮಡಿಕೇರಿ ತಾಲೂಕಿನ ಚೆಂಬು, ಕರಿಕೆ, ಸಂಪಾಜೆ, ಮದೆನಾಡು ಗ್ರಾಮಗಳಲ್ಲೂ ಜಲಪ್ರಳಯದ ಆತಂಕವಿದ್ದು, ಈ ಬಾಗಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ‌ತೀರ್ಮಾನಿಸಿದೆ. ಒಟ್ಟಾರೆ ಪ್ರವಾಹ, ಭೂಕುಸಿತದ‌ ಕಾರಣದಿಂದ ಕೊಡಗಿನ ಜನರಿಗೆ ನೆಮ್ಮದಿ ಇಲ್ಲವಾಗಿದೆ.

Leave a Comment

Your email address will not be published. Required fields are marked *