ರಾಜ್ಯ ಸರ್ಕಾರದಿಂದ ನಿಗಮ ಮಂಡಳಿಗಳ ನಾಮನಿರ್ದೇಶಿತರ ನೇಮಕ ರದ್ದತಿಗೆ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಿವಿಧ ನಿಗಮ, ಮಂಡಳಿಯ ನಾಮ ನಿರ್ದೇಶಿತ ಅಧ್ಯಕ್ಷರು, ಸದಸ್ಯರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಈಗ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ವಿವಿಧ ನಿಗಮ, ಮಂಡಳಿಗಳ ನಾಮ ನಿರ್ದೇಶಿತ ಅಧ್ಯಕ್ಷರು, ನಿರ್ದೇಶಕರು, ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ.

Ad Widget ... ..

ಈ ಸಂಬಂಧ ಕಂದಾಯ ಇಲಾಖೆಯ ಧಾರ್ಮಿಕದತ್ತಿಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ದಿನಾಂಕ 22-05-2023ರಲ್ಲಿ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತೆರ ಸರ್ಕಾರಿ, ಅರೆ ಸರ್ಕಾರಿ ಹಾಗೂ ಎಲ್ಲಾ ಅಧ್ಯಕ್ಷರು, ನಿರ್ದೇಶಕರುಗಳು, ಸದಸ್ಯರುಗಳ ನಾಮನಿರ್ದೇಶನಗಳನ್ನು ರದ್ದುಗೊಳಿಸಿ ಆದೇಶಿಸ ಹೊರಡಿಸಲು ಸೂಚಿಸಲಾಗಿದೆ ಎಂದಿದ್ದಾರೆ.

Ad Widget

ರಾಜ್ಯ ಧಾರ್ಮಿಕ ಪರಿಷತ್ತು, ಜಿಲ್ಲಾ ಧಾರ್ಮಿಕ ಪರಿಷತ್ತು, ಆರಾಧನಾ ಸಮಿತಿ, ಶ್ರೀ ಮಲೈ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿನ ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರ ಸದಸ್ಯತ್ವವನ್ನು ದಿನಾಂಕ 22-05-2023ರಿದಂ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *