ಸಮಗ್ರ ನ್ಯೂಸ್: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜೂ.11ರಿಂದ ಜೂ.13ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳುಕ್ಕುರಾಯರವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಸುದರ್ಶನ ಹೋಮ ಹಾಗೂ ಉಚ್ಚಾಟನ ಹೋಮ ಮೇ.25ರಂದು ನಡೆಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶೇಷಪ್ಪ ಗೌಡ ಬೆದ್ರಂಗಳ,ಆಡಳಿತ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರರು ಜನಾರ್ದನ ಆಚಾರ್ಯ, ಕೃಷ್ಣ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಟಾಡಿಗುತ್ತು, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಸಂಜೀವ ರೈ ಪೈಕ, ಉಪಾಧ್ಯಕ್ಷ ಪ್ರದೀಪ್ ಬೊಬ್ಬೆಕೇರಿ, ವಿಶ್ವನಾಥ

ರೈ ಮಾಳ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಕೋಶಾಧಿಕಾರಿ ಭವಿಷ್ ಕರಿಮಜಲು, ಕುಮಾರ್ ಆಚಾರ್ಯ ದೋಳ್ಪಾಡಿ, ಚಿದಾನಂದ ಉಪಾಧ್ಯಾಯ ಕಲ್ಪಡ, ಗಣೇಶ್ ಭಟ್ ಬೆದ್ರಂಗಳ ಹಾಗೂ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಗಳ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.