Ad Widget .

ಲಾರಿಗೆ ಡಿಕ್ಕಿ ಹೊಡೆದ ಕಾರು| 6 ಜನ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕಲಕೇರಿ ಬಳಿ ಇಂದು(ಮೇ.28) ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಾಜಪ್ಪ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಹಾಗೂ ರಶ್ಮಿಕಾ ಅಂತ ಗುರುತಿಸಲಾಗಿದೆ.

Ad Widget . Ad Widget .

ವಿಜಯಪುರಿಂದ ಬೆಂಗಳೂರಿಗೆ ಇಂಡಿಕಾ ಕಾರಿನಲ್ಲಿ ಹೋಗುವಾಗ ಕುಷ್ಟಗಿ ಹೆದ್ದಾರಿಯಲ್ಲಿ ಕಾರಿನ ಟೈರ್‌ ಸ್ಪೋಟಗೊಂಡಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ದೇಹಗಳು ಕೂಡ ನಜ್ಜುಗುಜ್ಜಾಗಿ ಮೈಯಲ್ಲಿನ ಮೂಳೆಗಳೆಲ್ಲ ಪುಡಿ- ಪುಡಿಯಾಗಿವೆ.

Ad Widget . Ad Widget .

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ: ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Comment

Your email address will not be published. Required fields are marked *