Ad Widget .

ಮೇ.31 ರಿಂದ ಶಾಲಾ ಶೈಕ್ಷಣಿಕ ವರ್ಷಾರಂಭ; ಮಾರ್ಗಸೂಚಿ ಪ್ರಕಟ| ಇತಿಹಾಸದಲ್ಲೇ ಮೊದಲ ಬಾರಿಗೆ ಪುಸ್ತಕ, ಯೂನಿಫಾರ್ಮ್ ವಿತರಿಸಿದ ಶಿಕ್ಷಣ ಇಲಾಖೆ|

ಸಮಗ್ರ ನ್ಯೂಸ್: 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ. 31 ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ. ಇದಕ್ಕೆ ಪೂರಕವಾಗಿ ಮೇ. 29 ಮತ್ತು 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಸರಿಪಡಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.

Ad Widget . Ad Widget .

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಒಂದು ಜತೆ ಸಮವಸ್ತ್ರ ಮತ್ತು ಶಾಲೆ ಆರಂಭಕ್ಕೂ ಮುನ್ನವೇ ಶೇ.98ರಷ್ಟು ಪಠ್ಯಪುಸ್ತಕಗಳನ್ನು ವಿತರಿಸಿ ದಾಖಲೆ ನಿರ್ಮಿಸಿದೆ.

Ad Widget . Ad Widget .

ಕಳೆದ ವರ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸೇರಿದಂತೆ ಪಠ್ಯಪುಸ್ತಕ ಕೂಡ ಸರಿಯಾದ ಸಮಯಕ್ಕೆ ಹಂಚಿಕೆ ಮಾಡಲಾಗಿರಲಿಲ್ಲ. ಆಗಸ್ಟ್ ತಿಂಗಳಾಂತ್ಯದವರೆಗೂ ಕಾಯಬೇಕಾಗಿತ್ತು. ಆದ್ರೇ ಈ ಬಾರಿ ಮಾತ್ರ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎನ್ನುವಂತೆ ಶಾಲೆಗಳ ಆರಂಭಕ್ಕೆ ಮುನ್ನವೇ ಸಮವಸ್ತ್ರ, ಪಠ್ಯಪುಸ್ತಕಗಳನ್ನು ವಿತರಿಸಿದೆ.

ಶಾಲೆ ಆರಂಭಕ್ಕಾಗಿ ಶಾಲೆಗಳನ್ನು ಸಿಂಗಾರಗೊಳಿಸುವಂತೆ, ಸಿಹಿ ಮತ್ತು ಬಿಸಿಯೂಟ ವಿತರಿಸಿ ಬರಮಾಡಿಕೊಳ್ಳುವಂತೆ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆಯನ್ನು ಶಿಕ್ಷಣ ಇಲಾಖೆ ಆಯುಕ್ತರು ನೀಡಿದ್ದಾರೆ.

Leave a Comment

Your email address will not be published. Required fields are marked *