Ad Widget .

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಮೇಜರ್ ಸರ್ಜರಿ| ಮೂರು ಲಕ್ಷಕ್ಕೂ ಅಧಿಕ ಅನರ್ಹ ಪಡಿತರ ಕಾರ್ಡ್ ಗಳು ರದ್ದು

ಸಮಗ್ರ ನ್ಯೂಸ್: ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, ಮೂರು ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆಹಾರ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯಾದ್ಯಂತ 3,30,002 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 ಬಿಪಿಎಲ್ ಕಾರ್ಡ್ ಗಳಿವೆ. ಕೆಲ ಕಾರ್ಡ್ ಗಳನ್ನು ಎಪಿಎಲ್ ಗೂ ಪರಿವರ್ತಿಸಲಾಗಿದೆ. ಬೆಂಗಳೂರಿನಲ್ಲಿ 34,705, ವಿಜಯಪುರದಲ್ಲಿ 28, 735, ಕಲಬುರಗಿ 16,945, ಬೆಳಗಾವಿ 16,765, ರಾಯಚೂರು 16,693 ಹಾಗೂ ಚಿತ್ರದುರ್ಗದಲ್ಲಿ 16,537 ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget .

ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರ ನೌಕರರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ ಎಂಬ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿದ್ದು, ಈವರೆಗೆ 17,338 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಹೊಸ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಹಾರ ಇಲಾಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 2021-22 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಕೋರಿ ರಾಜ್ಯಾದ್ಯಂತ ಸಲ್ಲಿಕೆಯಾಗಿರುವ 7,61,902 ಅರ್ಜಿಗಳ ಪೈಕಿ ,18,046 ಅರ್ಜಿಗಳು ವಿಲೇವಾರಿಯಾಗಿವೆ. 2,60,418 ಅರ್ಜಿಗಳು ಅನುಮೋದನೆಯಾದರೆ, 1,57,625 ಅರ್ಜಿಗಳು ತಿರಸ್ಕೃತಗೊಂಡಿವೆ. 3,43,856 ಅರ್ಜಿಗಳು ಬಾಕಿ ಉಳಿದಿದ್ದು, ವಿಲೇವಾರಿಗೆ ಸರ್ಕಾರದ ಅನುಮತಿಗಾಗಿ ಆಹಾರ ಇಲಾಖೆ ಕಾಯುತ್ತಿದೆ. ಅನುಮತಿ ಸಿಕ್ಕ ತಕ್ಷಣ ಪ್ರಕ್ರಿಯೆ ಶುರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿದಿದ್ದಾರೆ.

Leave a Comment

Your email address will not be published. Required fields are marked *