‘ಗೃಹಲಕ್ಷ್ಮಿ’ ಯೋಜನೆಯಡಿ ಅತ್ತೆಗೆ ಮಾತ್ರ ₹ 2000!?

ಸಮಗ್ರ ನ್ಯೂಸ್: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ.

Ad Widget ... ..

ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು.

Ad Widget

ಬೆಳಗಾವಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ ಎಂದರು.

ಇನ್ನು ನಾಳೆ ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದರು. ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಗೃಹಲಕ್ಷ್ಮೀ ಯೋಜನೆ ಸೊಸೆಗೆ ಸಿಗುವುದಿಲ್ಲ ಎನ್ನುವ ಸುಳಿವು ನೀಡಿದ್ದಾರೆ.

Leave a Comment

Your email address will not be published. Required fields are marked *