ಕಡಬ: ಬಸ್ ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

ಸಮಗ್ರ ನ್ಯೂಸ್: ಮೇ.25ರಂದು ಆಲಂಕಾರಿನಲ್ಲಿ ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Ad Widget ... ..

ಶಾರದಾ ನಗರದ ಗುಲಾಬಿ ಮೃತಪಟ್ಟ ಮಹಿಳೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದರು. ಬಸ್ಸಿನಿಂದ ಮಾರ್ಗಕ್ಕೆ ಬಿದ್ದ ಪರಿಣಾಮ ತಲೆಗೆ ಗಾಯವಾಗಿತ್ತು.

Ad Widget

ತಕ್ಷಣ ಅವರಿಗೆ ಸ್ಥಳೀಯ ಕ್ಲಿನಿಕ್‌ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೇ.29ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *