ಸಮಗ್ರ ನ್ಯೂಸ್: ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದರು. ಹೃದಯ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಅವರು ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9ನೇ ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿದ್ದ ಸಾಲಿಯತ್, ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.