Ad Widget .

ಕಾಂಗ್ರೆಸ್ ನ ಚುನಾವಣಾ ಗ್ಯಾರಂಟಿ ದೇಶವನ್ನು ದಿವಾಳಿ ಮಾಡುತ್ತೆ – ನಮೋ ವಾಗ್ದಾಳಿ

ಸಮಗ್ರ ನ್ಯೂಸ್: ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್‌ ಅನುಸರಿಸುತ್ತಿರುವ ‘ಗ್ಯಾರಂಟಿ ಸೂತ್ರ’ ದೇಶವನ್ನು ದಿವಾಳಿ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

Ad Widget . Ad Widget .

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಒಂಬತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಸ್ಥಾನದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇದೇ ತಿಂಗಳ ಆರಂಭದಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ವಿಚಾರ ಉಲ್ಲೇಖಿಸಿದರು.

Ad Widget . Ad Widget .

ಕಾಂಗ್ರೆಸ್ ಹೊಸ ಗ್ಯಾರಂಟಿ ಸೂತ್ರವನ್ನು ಅನುಸರಿಸುತ್ತಿದೆ. ಆದರೆ, ಅವರು (ಕಾಂಗ್ರೆಸ್ಸಿಗರು) ಕೊಟ್ಟ ಭರವಸೆಗಳನ್ನು ಪೂರೈಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಐವತ್ತು ವರ್ಷಗಳ ಹಿಂದೆ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಆದರೆ, ಇದು ಬಡವರಿಗೆ ಕಾಂಗ್ರೆಸ್ಸಿಗರು ಮಾಡಿದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ.

Leave a Comment

Your email address will not be published. Required fields are marked *