May 2023

ಕಡಬ: ಚಲಿಸುತ್ತಿರುವ ಬಸ್ ನಿಂದ ಬಿದ್ದು ಮಹಿಳೆ ಜಖಂ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದು ಜಖಂಗೊಂಡಿರುವ ಘಟನೆ ಕಡಬ ತಾಲೂಕಿನ ಆಲಂಕಾರು ಎಂಬಲ್ಲಿ ನಡೆದಿದೆ. ಮಹಿಳೆಯನ್ನು ಇಲ್ಲಿನ ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ. ಬಸ್ ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟಿದ್ದು, ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್ ಗೆ ಹತ್ತಿದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಅವರಿಗೆ ಹತ್ತಿರದ ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಸ್ಸಿನ […]

ಕಡಬ: ಚಲಿಸುತ್ತಿರುವ ಬಸ್ ನಿಂದ ಬಿದ್ದು ಮಹಿಳೆ ಜಖಂ Read More »

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕ್ತಿದೀರಾ? ಹಾಗಾದ್ರೆ ಜೋಕೆ…

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕುವವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದೆ. “ಸಾರ್ವಜನಿಕರ ಗಮನಕ್ಕೆ ಸುಳ್ಯ ಪೊಲೀಸ್ ಠಾಣಾ ಪ್ರಕಟಣೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ , ಇನ್ಸ್ಟಾಗ್ರಾಮ್, ಟ್ವಿಟ್ಟರ್ ಮುಂತಾದವುಗಳಲ್ಲಿ ಇತರರ ಬಗ್ಗೆ ಅವಹೇಳನಕಾರಿ ಭಾವಚಿತ್ರ ವಿಡಿಯೋ ಮುಂತಾದ ಪೋಸ್ಟ್ ಗಳನ್ನು ಹಾಕಬಾರದು. ಯಾರಾದರೂ ಪೋಸ್ಟ್ ಮಾಡಿದ ಬಗ್ಗೆ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡುವುದು. ಹಾಗೂ ಈ ಬಗ್ಗೆ ಯಾವುದೇ ಅಹಿತಕರ ಘಟನೆಗೆ ಆಸ್ಪದ

ಸುಳ್ಯ: ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಹಾಕ್ತಿದೀರಾ? ಹಾಗಾದ್ರೆ ಜೋಕೆ… Read More »

ಸುರತ್ಕಲ್: ಫ್ಲೆಕ್ಸ್ ನಲ್ಲಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ಭಾವಚಿತ್ರಕ್ಕೆ ಮತಾಂಧರಿಂದ ಹಾನಿ!

ಸಮಗ್ರ ನ್ಯೂಸ್: ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್ ಶ್ರೀ ಕೃಷ್ಣ ಭಜನಾ ಮಂದಿರ ಮುಂಭಾಗ ಮಂಗಳೂರು ಉತ್ತರ ಶಾಸಕ ಡಾ.ಭರತ್ ವೈ. ಶೆಟ್ಟಿಯವರಿಗೆ ಶುಭಾಶಯ ಕೋರಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ಯುವಮೋರ್ಚಾ ಮುಖಂಡ ಭರತ್ ರಾಜ್ ಕೃಷ್ಣಾಪುರ ಅವರ ಭಾವಚಿತ್ರಕ್ಕೆ ಚೂರಿಯಿಂದ ಹಾನಿ ಮಾಡಲಾದ ಘಟನೆ ಇಂದು ಬೆಳಕಿಗೆ ಬಂದಿದೆ. ಭರತ್ ರಾಜ್ ಕೃಷ್ಣಾಪುರ ಬಿಜೆಪಿ ಯುವಮೋರ್ಚಾ ಮಂಗಳೂರು ಉತ್ತರ ಮಂಡಲದ ಅಧ್ಯಕ್ಷರಾಗಿದ್ದು ಕೆಲವು ತಿಂಗಳ ಹಿಂದೆ ಇದೇ ರೀತಿ ಬ್ಯಾನರ್ ನಲ್ಲಿದ್ದ ಅವರ

ಸುರತ್ಕಲ್: ಫ್ಲೆಕ್ಸ್ ನಲ್ಲಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ಭಾವಚಿತ್ರಕ್ಕೆ ಮತಾಂಧರಿಂದ ಹಾನಿ! Read More »

ಮಂಗಳೂರು: ಟೇಕಾಪ್ ಅಗ್ತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ| ಕೂದಲೆಳೆಯಲ್ಲಿ ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ವಿಮಾನ ಜಸ್ಟ್​ ಎಸ್ಕೇಪ್​​​ ಆಗಿದ್ದು, ಟೇಕಾಫ್​ ಮಾಡ್ತಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಭಾರೀ ಅವಘಡದಿಂದ ಇಂಡಿಗೋ ವಿಮಾನ ಪಾರಾಗಿದೆ. ಈ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಇಂಡಿಗೋ ವಿಮಾನ ಮಂಗಳೂರಿನಿಂದ ದುಬೈಗೆ ಹೊರಟಿತ್ತು, ವಿಮಾನ ಪ್ರಯಾಣಿಕರ ಸಹಿತ ಬೆಳಗ್ಗೆ 8.30ಕ್ಕೆ ದುಬೈಗೆ ಹೊರಟಿದ್ದು, ಇಂಡಿಗೋ ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದು, ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಬಡಿದಿದೆ. ಪೈಲಟ್ ತಕ್ಷಣ

ಮಂಗಳೂರು: ಟೇಕಾಪ್ ಅಗ್ತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ| ಕೂದಲೆಳೆಯಲ್ಲಿ ತಪ್ಪಿದ ಭಾರೀ ಅನಾಹುತ Read More »

ಮರಗಳನ್ನು ಕಡಿಯುವುದು ಮಹಾ ಪಾಪ:-ನಾರಾಯಣ ಆರ್

ಸಮಗ್ರ ನ್ಯೂಸ್: ‘ಮರಗಳನ್ನು ಕಡಿಯುವುದು ಮಹಾ ಪಾಪ ಕಾಡು ಮನುಷ್ಯನಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುತ್ತಾ ಬಂದಿದೆ ಕಾಡು ಮನುಷ್ಯನ ಮೂಲಭೂತ ಸೌಕರ್ಯಗಳನ್ನು ಪೂರೈಸಲು ಸಹಾಯಕವಾಗಿದೆ’ ಎಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ದೊಡ್ಡಬೈರನಕುಪ್ಪೆ ವಲಯದ ಉಪವಲಯ ಅಧಿಕಾರಿ ನಾರಾಯಣ ಆರ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ಸಂಶೋಧನಾ ಮತ್ತು ಅಧ್ಯಯನ ವಿಭಾಗದಿಂದ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಶಿಬಿರದ ನಾಲ್ಕನೇ ದಿನದ ಮಾಹಿತಿ ಕಾರ್ಯಾಗಾರದಲ್ಲಿ ಮಂಗಳವಾರ ಮಾತನಾಡಿದರು. ಕಾಡು ಹಲವು ಜೀವಿಗಳಿಗೆ ವಾಸಸ್ಥಾನ.

ಮರಗಳನ್ನು ಕಡಿಯುವುದು ಮಹಾ ಪಾಪ:-ನಾರಾಯಣ ಆರ್ Read More »

ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು‌ ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್‌ ಮುಂದಾಗಿದ್ದು ಮೊದಲ ಎಫ್‌ಐಆರ್‌ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. 2 ರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಆದರೆ

ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು‌ ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು Read More »

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಕುರಿತು ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ ಅಭಿಮಾನಿ ಬಳಗದ ಸುಮಾರು 15ಕ್ಕೂ ಹೆಚ್ಚು ಯುವಕರ ತಂಡ ಸುಳ್ಯ ಜಯನಗರ ಪ್ರಮೀತ್ ರವರ ಮನೆಗೆ ತೆರಳಿ ಫೇಸ್ಬುಕ್ಕಿನಲ್ಲಿ ಬರೆದ ಪೋಸ್ಟನ್ನು ಡಿಲೀಟ್ ಮಾಡುವಂತೆ ಮತ್ತು ಶಾಸಕರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು,ವಿಷಯ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ತಂಡದವರನ್ನು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ Read More »

Weather report| ರಾಜ್ಯದಲ್ಲಿ ಮುಂದುವರಿದ ಪೂರ್ವ ಮುಂಗಾರು| ಇನ್ನೆರಡು ದಿನವೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು. ರಾಮನಗರ, ಮಂಡ್ಯ, ಚಾಮರಾಜನಗರದಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದಿನ 2

Weather report| ರಾಜ್ಯದಲ್ಲಿ ಮುಂದುವರಿದ ಪೂರ್ವ ಮುಂಗಾರು| ಇನ್ನೆರಡು ದಿನವೂ ಮಳೆ ಸಾಧ್ಯತೆ Read More »

ಕಾಂಗ್ರೆಸ್ ಕಾರ್ಯಕರ್ತನ ಕೊಚ್ಚಿ ಕಗ್ಗೊಲೆ

ಸಮಗ್ರ ನ್ಯೂಸ್: ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಚೌಡೇಶ್ವರಿ ನಗರದಲ್ಲಿ ನಡೆದಿದೆ. ಬೆಂಗಳೂರಿನ ಚೌಡೇಶ್ವರಿ ನಗರದ ಹಳ್ಳಿ ರುಚಿ ಬಳಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನೇ ಕೊಲೆಯಾದ ದುರ್ದೈವಿ. ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ರವಿ ಹತ್ಯೆಗೂ ಮುನ್ನ ಏರಿಯಾಗಳಲ್ಲಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ್ದಾರೆ. ಬಳಿಕ ರವಿಯನ್ನು ಸಿಎಂಹೆಚ್ ಬಾರ್ ನಿಂದ ಅಟ್ಟಾಡಿಸಿಕೊಂಡು ಬಂದು ಹಳ್ಳಿ ರುಚಿ ಹೋಟೆಲ್ ಮುಂಭಾಗ ಮಾರಕಾಸ್ತ್ರಗಳಿಂದ

ಕಾಂಗ್ರೆಸ್ ಕಾರ್ಯಕರ್ತನ ಕೊಚ್ಚಿ ಕಗ್ಗೊಲೆ Read More »

ಕಾಲೇಜು ಪ್ರವೇಶಾತಿಗೆ ‘ಏಕರೂಪ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

ಸಮಗ್ರ ನ್ಯೂಸ್: ಉನ್ನತ ಶಿಕ್ಷಣ ಇಲಾಖೆಯು 2023-24 ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಅವುಗಳ ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕೋರ್ಸುಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಪ್ರಸ್ತುತ ಸಾಲಿನಲ್ಲಿ ಮೇ.22 ರಿಂದ ಜುಲೈ 15 ರೊಳಗೆ ಪದವಿ ಕಾಲೇಜುಗಳ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜು.17 ರಿಂದ ತರಗತಿಗಳನ್ನು ಆರಂಭಿಸಿ, ನವೆಂಬರ್ 18 ಕ್ಕೆ ಮುಕ್ತಾಯಗೊಳಿಸಬೇಕು. ನವೆಂಬರ್ 20 ರಿಂದ ಪರೀಕ್ಷೆಗಳನ್ನು

ಕಾಲೇಜು ಪ್ರವೇಶಾತಿಗೆ ‘ಏಕರೂಪ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ Read More »