May 2023

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗ ಮಾಡುವೆ – ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‍ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ, ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ ಬಹಿರಂಗಪಡಿಸುವೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಬ್ಯಾನರ್ ಹಾಕಿದ ಆರೋಪಿಗಳಿಗೆ ಹಲ್ಲೆ ನಡೆಸಿದ್ದು ಕಾಂಗ್ರೆ‌ಸ್‌ನವರೇ, ಕಾಂಗ್ರೆಸ್ ಸರಕಾರ ಬಂದರೆ ಹೀಗೆಲ್ಲಾ ಆಗುತ್ತದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಕಲ್ಲಡ್ಕ […]

ಪುತ್ತೂರಿನಲ್ಲಿ ದೌರ್ಜನ್ಯ ನಡೆಸಲು ಒತ್ತಡ ಹಾಕಿದವರ ಹೆಸರು ಎರಡು ದಿನಗಳಲ್ಲಿ ಬಹಿರಂಗ ಮಾಡುವೆ – ಅಶೋಕ್ ಕುಮಾರ್ ರೈ Read More »

ಇಂದು ರಾಜ್ಯದ 31ನೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ| ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಜೊತೆ 8 ಮಂದಿ ಸಚಿವರಾಗಿ ಪ್ರಮಾಣವಚನ

ಸಮಗ್ರ ನ್ಯೂಸ್: ಇಂದು ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ

ಇಂದು ರಾಜ್ಯದ 31ನೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ| ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಜೊತೆ 8 ಮಂದಿ ಸಚಿವರಾಗಿ ಪ್ರಮಾಣವಚನ Read More »

ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ

ಸಮಗ್ರ ನ್ಯೂಸ್: ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ ಕೆ ಭುಜಂಗಶೆಟ್ಟಿ ಅವರು ನಿಧನ ಹೊಂದಿದ್ದಾರೆ. ಇಂದು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ 6 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತವಾಗಿತ್ತು. ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಡಾ.ಕೆ ಭುಜಂಗಶೆಟ್ಟಿ ಅವರು, ಬೆಂಗಳೂರು ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, ಅಲ್ಲಿ ಅವರು 1978ರಲ್ಲಿ ಎಂಬಿಬಿಎಸ್ ಮಾಡಿದರು.

ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇನ್ನಿಲ್ಲ Read More »

ಶೃಂಗೇರಿ ಸಮೀಪ ತುಂಗೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಸಮಗ್ರ ನ್ಯೂಸ್: ಶೃಂಗೇರಿ ಸಮೀಪದ ನೆಮ್ಮಾರು ಎಂಬಲ್ಲಿ ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಮೃತರು ಹರಿಹರಪುರದ ರಕ್ಷಿತ್ ಮತ್ತು ಶೃಂಗೇರಿಯ ಸುಂಕದ ಮಕ್ಕಿಯ ಪ್ರಜ್ವಲ್ ಎನ್ನುವವರಾಗಿದ್ದಾರೆ. ರಕ್ಷಿತ್ ಹಾಗೂ ಪ್ರಜ್ವಲ್ ಶೃಂಗೇರಿಯ ಖಾಸಗಿ ಕಾಲೇಜಿನ 14 ವಿದ್ಯಾರ್ಥಿಗಳೊಂದಿಗೆ ಈಜಲು ತೆರಳಿದ್ದರು. ರಕ್ಷಿತ್ ನೀರಿನಲ್ಲಿ ಸಿಲುಕಿಕೊಂಡಿದ್ದಾಗ ಪ್ರಜ್ವಲ್‌ ಆತನ ರಕ್ಷಣೆಗೆ ತೆರಳಿದ್ದು ಆತನೂ ನೀರು ಪಾಲಾಗಿದ್ದಾನೆ ಎಂದು ತಿಳಿದು ಬಂದಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೃಂಗೇರಿ ಸಮೀಪ ತುಂಗೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು Read More »

ಸಿಎಂ ಗದ್ದುಗೆ ಸಿಕ್ಕಿದ ಖುಷಿಯಲ್ಲೇ‌ ಕೋಟಿ‌ ಬೆಲೆಬಾಳುವ ಕಾರು ಖರೀದಿಸಿದ ಸಿದ್ದರಾಮಯ್ಯ!!

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ನಾಳೆ ಹೊಸ ಸರ್ಕಾರ ರಚನೆ ಮಾಡಲಿದೆ. ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಜೊತೆಗೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಸಿಎಂ ಕುರ್ಚಿಗಾಗಿ ನಡೆದ ಜಟಾಪಟಿಯಲ್ಲಿ ಸಿದ್ದು ಕೈ ಮೇಲಾಗಿದೆ. ದೆಹಲಿಯಲ್ಲಿ ಸಿಎಂ ಪಟ್ಟ ಘೋಷಣೆಯಾಗುತ್ತಿದ್ದಂತೆ, ಇತ್ತ ಸಿದ್ದರಾಮಯ್ಯ 1 ಕೋಟಿ ರೂಪಾಯಿ ಟೋಯೋಟಾ ವೆಲ್‌ಫೈರ್ ಕಾರು ಖರೀದಿಸಿದ್ದಾರೆ. ಟೋಯೋಟಾ ವೆಲ್‌ಫೈರ್

ಸಿಎಂ ಗದ್ದುಗೆ ಸಿಕ್ಕಿದ ಖುಷಿಯಲ್ಲೇ‌ ಕೋಟಿ‌ ಬೆಲೆಬಾಳುವ ಕಾರು ಖರೀದಿಸಿದ ಸಿದ್ದರಾಮಯ್ಯ!! Read More »

ಸುಳ್ಯ: ನಗರ ಪಂಚಾಯತ್ ಮಾಜಿ ಅಧ್ಯಕ್ಷರ ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ|ಬೆಂಗಳೂರಿನಲ್ಲಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ರವರ ಮನೆಗೆ ಮೇ. 3 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬೆಂಗಳೂರು ಗೋವಿಂದರಾಜನಗರ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಕಳ್ಳತನ ಮಾಡಿದ ಚಿನ್ನವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ, ಸಂಶಯಗೊಂಡ ಚಿನ್ನದಂಗಡಿಯವರು ಪೋಲೀಸರಿಗೆ ಮಾಹಿತಿ ನೀಡಿದರೆನ್ನಲಾಗಿದೆ. ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಮೈಸೂರಿನ ಇಬ್ಬರು ವ್ಯಕ್ತಿಗಳ ಹೆಸರು ಹೇಳಿದ.

ಸುಳ್ಯ: ನಗರ ಪಂಚಾಯತ್ ಮಾಜಿ ಅಧ್ಯಕ್ಷರ ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ|ಬೆಂಗಳೂರಿನಲ್ಲಿ ಆರೋಪಿಗಳ ಬಂಧನ Read More »

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ ಎರಡೇ ದಿವಸದಲ್ಲಿ ಹೀಗಾದರೆ ಮುಂದಿನ ಐದು ವರ್ಷದಲ್ಲಿ ನಮ್ಮ ಯುವಕರು ಪರಿಸ್ಥಿತಿ ಏನಾಗಬಹುದು ಎಂಬುದು ಚಿಂತೆಯಾಗಿದೆ.‌ ಹಿಂದುಗಳ

ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ Read More »

2,000 ರೂ. ನೋಟನ್ನು ಸ್ಥಗಿತಗೊಳಿಸಿದ RBI| ಕಾರಣ ಯಾಕೆಗೊತ್ತ..?

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 2,000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಂಡಿದೆ. ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳಲ್ಲಿ ಸೆಪ್ಟೆಂಬರ್ 30, 2023 ರೊಳಗೆ ರೂ. 2000 ಮುಖಬೆಲೆಯ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 1, 2023 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬ್ಯಾಂಕ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು

2,000 ರೂ. ನೋಟನ್ನು ಸ್ಥಗಿತಗೊಳಿಸಿದ RBI| ಕಾರಣ ಯಾಕೆಗೊತ್ತ..? Read More »

ಹರೀಶ್ ಪೂಂಜಾಗೆ ಎಚ್ಚರಿಕೆ ನೀಡಿದ ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಮೇ 19, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದ ಗೌಡರ ಫೋಟೋ ಹೊಂದಿದ್ದ ಬ್ಯಾನರ್’ಗೆ ಚಪ್ಪಲಿ ಹಾರ, ಶ್ರದ್ದಾಂಜಲಿ ಕೋರಿದ್ದ ಬ್ಯಾನರ್ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರಿಗೆ ಎಚ್ಚರಿಕೆ ನೀಡಿದ್ದಾರೆ. “ನನ್ನ ಕ್ಷೇತ್ರಕ್ಕೆ ಬಂದರೆ ಹುಷಾರ್” ಎನ್ನುವ ಮಾತಿನಲ್ಲಿ ನಡೆದಿರುವ ವಿವಾದದ ಬಗ್ಗೆ ನಾನೇ ನೋಡಿಕೊಳ್ಳುತ್ತೇನೆ ಎಂದು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದ್ದಾರೆ. “ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು,

ಹರೀಶ್ ಪೂಂಜಾಗೆ ಎಚ್ಚರಿಕೆ ನೀಡಿದ ಅಶೋಕ್ ಕುಮಾರ್ ರೈ Read More »

ಪುತ್ತೂರು: ಅಜಿತ್ ರೈ ಹೊಸಮನೆ ಅವರನ್ನು ತಳ್ಳಿ ಹೊರ ಹಾಕಿದ್ರ ಹಿಂದೂ ಕಾರ್ಯಕರ್ತರು?

ಸಮಗ್ರ ನ್ಯೂಸ್: ಬ್ಯಾನರ್ ಅಳವಡಿಕೆ ನಂತರ ಪುತ್ತೂರಿನಲ್ಲಿ ಗಂಭೀರ ನಾಟಕವೇ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ್ದು ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದ್ದು, ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತಿದೆ. ಈ ಸಮಯದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಹಲ್ಲೆಗೊಳಗಾದವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಈ ನಡುವೆ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ತಳ್ಳಿ ಹೊರಹಾಕಿದ ಘಟನೆ ನಡೆದಿದೆ. ಈ ಹಿಂದೆ ಹಿಂದೂ

ಪುತ್ತೂರು: ಅಜಿತ್ ರೈ ಹೊಸಮನೆ ಅವರನ್ನು ತಳ್ಳಿ ಹೊರ ಹಾಕಿದ್ರ ಹಿಂದೂ ಕಾರ್ಯಕರ್ತರು? Read More »