May 2023

ಇ-ಮೇಲ್ ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ ಗೂಗಲ್ ಸಂಸ್ಥೆ

ಸಮಗ್ರ ನ್ಯೂಸ್: ನಿಮ್ಮಲ್ಲಿರುವ ಇ-ಮೇಲ್ ಖಾತೆಯನ್ನು 2 ವರ್ಷಗಳಿಂದ ಬಳಕೆ ಮಾಡದಿದ್ದಲ್ಲಿ ನಿಮ್ಮ ಖಾತೆಗೆ ಇದೀಗ ಕುತ್ತು ಬರುವ ಸಾಧ್ಯತೆಯಿದೆ. ಗೂಗಲ್ ತನ್ನ ಬಳಕೆದಾರರ ಖಾತೆಗಳ ಹೊಸ ಬದಲಾವಣೆಯನ್ನು ತಂದಿದೆ. ಬಳಕೆದಾರರು ತನ್ನ ಹಳೆಯ ಗೂಗಲ್ ಖಾತೆಗಳನ್ನು ಲಾಗಿನ್ ಹಾಗೂ ಪರಿಶೀಲನೆ ಮಾಡುವಂತೆ ತಿಳಿಸಿದೆ. ಈ ಹಿಂದೆ 2 ವರ್ಷಗಳಿಂದ ಕಾರ್ಯನಿರ್ವಹಿಸದ ಗೂಗಲ್ ಖಾತೆಗಳಲ್ಲಿ ಸಂಗ್ರಹವಾಗಿರುವ ಡೇಟಾಗಳನ್ನು ಅಳಿಸಿ ಹಾಕುವುದಾಗಿ ಗೂಗಲ್ ಹೇಳಿತ್ತು. ಆದರೆ ಇದೀಗ ಇಡೀ ಖಾತೆಯನ್ನೇ ಅಳಿಸಿ ಹಾಕುವುದಾಗಿ ಗೂಗಲ್ ಎಚ್ಚರಿಕೆ ನೀಡಿದೆ. ಈ […]

ಇ-ಮೇಲ್ ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ ಗೂಗಲ್ ಸಂಸ್ಥೆ Read More »

ಸುಳ್ಯ: ಮಾಜಿ ಜಿ.ಪಂ ಸದಸ್ಯ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವು

ಸಮಗ್ರ ನ್ಯೂಸ್: ಮಾಜಿ‌ ಜಿ.ಪಂ ಸದಸ್ಯ, ಸುಳ್ಯದ ಪ್ರಭಾವಿ ನಾಯಕ, ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಇಂದು (ಮೇ. 18) ನಡೆದಿದೆ. ತುದಿಯಡ್ಕ ಬಳಿ ನದಿಯಲ್ಲಿ ಪಂಪ್ ವಾಲ್ ಪಿಟ್ ಸರಿಪಡಿಸುವ ಸಂದರ್ಭದಲ್ಲಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ: ಮಾಜಿ ಜಿ.ಪಂ ಸದಸ್ಯ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವು Read More »

ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ| ಮೇ.20 ಕ್ಕೆ ಪ್ರಮಾಣವಚನ

ಸಮಗ್ರ ನ್ಯೂಸ್: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆ ಬಿದ್ದಿದ್ದು, ಮೇ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮೇ 20 ರಂದು ಮಧ್ಯಾಹ್ನ 12.30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬುಧವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಂತರ ಸ್ಥಗಿತಗೊಳಿಸಲಾಗಿತ್ತು. ಶನಿವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮತ್ತೆ ಸಿದ್ಧತೆ ಕೈಗೊಳ್ಳಲಾಗಿದೆ.

ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ| ಮೇ.20 ಕ್ಕೆ ಪ್ರಮಾಣವಚನ Read More »

ಲೇಡಿ ಸಿಂಗಂ ಎಂದು ಖ್ಯಾತಿ ಪಡೆದ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಮೃತ್ಯು

ಸಮಗ್ರ ನ್ಯೂಸ್: ಲೇಡಿ ಸಿಂಗಂ ಎಂದೇ ಖ್ಯಾತಿ ಪಡೆದ ಅಸ್ಸಾಂನ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ(30) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ‘ದಬಾಂಗ್ ಕ್ಯಾಪ್’ ಎಂದೂ ಪ್ರಖ್ಯಾತಿ ಪಡೆದಿದ್ದರು. ಇವರು ನಾಗಾವ್ ಜಿಲ್ಲೆಯಲ್ಲಿ ಹಾದು ಹೋದ ರಾಜ್ಯ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ರಾಬಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ವೇಳೆ ಜುನ್ಮೋನಿ ರಾಭಾ ತನ್ನ ಖಾಸಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಮತ್ತು

ಲೇಡಿ ಸಿಂಗಂ ಎಂದು ಖ್ಯಾತಿ ಪಡೆದ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಮೃತ್ಯು Read More »

ಹಿಜಾಬ್ ಗೆ ನ್ಯಾಯ ಒದಗಿಸುತ್ತೇವೆ: ಯು.ಟಿ. ಖಾದರ್‌

ಸಮಗ್ರ ನ್ಯೂಸ್: ಶಾಲಾ ಕಾಲೇಜುಗಳ ಹಿಜಾಬ್‌ ನಿಷೇಧದ ವಿಚಾರ ಸುಪ್ರೀಂ ಕೋರ್ಟ್‌ನ ಮೆಟ್ಟಿಲಲ್ಲಿದೆ. ನ್ಯಾಯಾಲಯದ ತೀರ್ಪನ್ನು ಮರುಪರಿಶೀಲಿಸಿ ಆ ಪ್ರಕಾರ ಸಾಮರಸ್ಯ ಕಾಪಾಡುವಂತಹ ನಿರ್ಧಾರವನ್ನು ಹೊಸ ಸರ್ಕಾರ ತೆಗೆದುಕೊಳ್ಳಲಿದೆ’ ಎಂದು ಶಾಸಕ ಯು.ಟಿ.ಖಾದರ್‌ ಹೇಳಿದರು. ಮಂಗಳವಾರ ಮುಸ್ಲೀಮರ ಶೇ 4ರಷ್ಟು ಮೀಸಲಾತಿ ರದ್ದತಿ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ ‘ಈ ವಿಚಾರದಲ್ಲಿ ಹಿಂದಿನ ಸರ್ಕಾರ ದುರುದ್ದೇಶಪೂರಿತ ಹಾಗೂ ರಾಜಕೀಯ ಪ್ರೇರಿತ ನಿರ್ಧಾರ ತೆಗೆದುಕೊಂಡಿದೆ. ಹಿಂದುಳಿದ ವರ್ಗದ ಒಳಮೀಸಲಾತಿ ಜಾರಿಗೆ ತರುವ ವರದಿಯನ್ನು ಪಡೆಯದೆ ಶಾಶ್ವತ ಸ್ಥಾನ ಕಲ್ಪಿಸಲು ಸರ್ಕಾರ

ಹಿಜಾಬ್ ಗೆ ನ್ಯಾಯ ಒದಗಿಸುತ್ತೇವೆ: ಯು.ಟಿ. ಖಾದರ್‌ Read More »

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ: ಕಟೀಲ್ ವಾಗ್ದಾಳಿ

ಸಮಗ್ರ ನ್ಯೂಸ್‌: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ, ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹೊಸಕೋಟೆ ಕ್ಷೇತ್ರ ದ ಡಿ ಶೆಟ್ಟಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೋತ್ಸವ ನೆಪದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಪಟಾಕಿ ಸಿಡಿಸಬೇಡಿ ಎಂದಿದ್ದಕ್ಕೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ದಾಳಿಯಾಗಿದೆ. ಹೊಸಕೋಟೆ ಕ್ಷೇತ್ರದ ಡಿ ಶೆಟ್ಟಹಳ್ಳಿ ವಾಸಿ ಕೃಷ್ಣಪ್ಪ ಮತ್ತು

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ: ಕಟೀಲ್ ವಾಗ್ದಾಳಿ Read More »

ನಳಿನ್ ಕುಮಾರ್,ಸದಾನಂದ ಗೌಡರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ಆರೋಪಿಗಳಿಗೆ ರಕ್ತ ಒಸರುವಷ್ಟು ಥಳಿಸಿದ ಪೊಲೀಸರು |ನಡೆಯಲಾಗದ ಸ್ಥಿತಿಯಲ್ಲಿ ಕಾರ್ಯಕರ್ತರು

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಬಾಸುಂಡೆ ಬರುವ ರೀತಿ ಥಳಿಸಿದ್ದು ಪೊಲೀಸರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಏಳು ಮಂದಿ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಪಕ್ಷದ ಸೋಲಿನ ಬಗ್ಗೆ ಆಕ್ರೋಶಗೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 2 ಆರೋಪಿಗಳನ್ನು ಪೊಲೀಸರು

ನಳಿನ್ ಕುಮಾರ್,ಸದಾನಂದ ಗೌಡರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ| ಆರೋಪಿಗಳಿಗೆ ರಕ್ತ ಒಸರುವಷ್ಟು ಥಳಿಸಿದ ಪೊಲೀಸರು |ನಡೆಯಲಾಗದ ಸ್ಥಿತಿಯಲ್ಲಿ ಕಾರ್ಯಕರ್ತರು Read More »

ಸುಳ್ಯ: ಇಂದು(ಮೇ.17) ಮತ್ತು ನಾಳೆ(ಮೇ.18) ಕೋಲ್ಚಾರಿನಲ್ಲಿ ಸಂಭ್ರಮದ ದೈವಂಕಟ್ಟು ಮಹೋತ್ಸವ| ಸಾವಿರಾರು ಭಕ್ತಾದಿಗಳು ಸೇರುವ ನಿರೀಕ್ಷೆ

ಸಮಗ್ರ ನ್ಯೂಸ್: ಸುಳ್ಯದ ಕೋಲ್ಚಾರು ಕುಟುಂಬದ ತರವಾಡು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಇಂದು ಮತ್ತು ನಾಳೆ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಭಕ್ತಿ ಸಂಭ್ರಮದಿಂದ ನಡೆಯಲಿರುವುದು. ಇಂದು(ಮೇ. 17) ಸಂಜೆ ಶ್ರೀ ದೈವಗಳ ವೆಳ್ಳಾಟಂ ನಡೆಯಲಿದ್ದು ನಾಳೆ ಬೆಳಗ್ಗೆ ದೈವದ ಉತ್ಸವ ನಡೆಯಲಿರುವುದು. ನಾಳೆ ಸಂಜೆ ಶ್ರೀ ವಯನಾಟ್ ಕುಲವನ್ ದೈವದ ಅಂಗಣ ಪ್ರವೇಶವಾಗಿ ಸೂಟೆ ಸಮರ್ಪಣೆಯಾಗಲಿದೆ. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಕೋಲ ನಡೆಯಲಿದೆ. ಕೋಲ್ಚಾರು ದೈವಸ್ಥಾನದಲ್ಲಿ ಸುಮಾರು 54 ವರ್ಷಗಳ

ಸುಳ್ಯ: ಇಂದು(ಮೇ.17) ಮತ್ತು ನಾಳೆ(ಮೇ.18) ಕೋಲ್ಚಾರಿನಲ್ಲಿ ಸಂಭ್ರಮದ ದೈವಂಕಟ್ಟು ಮಹೋತ್ಸವ| ಸಾವಿರಾರು ಭಕ್ತಾದಿಗಳು ಸೇರುವ ನಿರೀಕ್ಷೆ Read More »

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ|ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ|ಡಿಕೆಶಿಗೆ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ರೇಸ್​ನಲ್ಲಿ ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಜಯವಾಗಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಸಿದ್ದು ನಿವಾಸದಲ್ಲಿ ಬಿಗಿಭದ್ರತೆಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ|ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ|ಡಿಕೆಶಿಗೆ ಭರವಸೆ Read More »

ಉಡುಪಿ: ʻಮೆಸ್ಕಾಂನವರೇ ಕ್ಷಮಿಸಿ ನಮಗೆ ಕರೆಂಟ್‌ ಬಿಲ್‌ ಕೊಡ್ಬೇಡಿ ನಾವು ಕಟ್ಟಲ್ಲʼ ಮೀಟರ್ ಬೋರ್ಡಿನಲ್ಲಿ ಫಲಕ ಅಳವಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆ ಮಾಡಿತ್ತು. ಸದ್ಯ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ನಾವು ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ. ಇದೇ ರೀತಿ ʻಮೆಸ್ಕಾಂನವರೇ ಕ್ಷಮೀಸಿ ನಮಗೆ ಕರೆಂಟ್‌ ಬಿಲ್‌ ಕೊಡ್ಬೇಡಿ ನಾವು ಕಟ್ಟಲ್ಲʼ ಎಂದು ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಎಂಬುವವರು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ.

ಉಡುಪಿ: ʻಮೆಸ್ಕಾಂನವರೇ ಕ್ಷಮಿಸಿ ನಮಗೆ ಕರೆಂಟ್‌ ಬಿಲ್‌ ಕೊಡ್ಬೇಡಿ ನಾವು ಕಟ್ಟಲ್ಲʼ ಮೀಟರ್ ಬೋರ್ಡಿನಲ್ಲಿ ಫಲಕ ಅಳವಡಿಕೆ Read More »