May 2023

ಪುತ್ತೂರು: ಡಿ.ವಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ!! ಬಿಜೆಪಿ ಸೋಲಿಗೆ ಕಾರಣ ಆರೋಪ

ಸಮಗ್ರ ನ್ಯೂಸ್: ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ‘ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ’ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು […]

ಪುತ್ತೂರು: ಡಿ.ವಿ ಸದಾನಂದ ಗೌಡ ಮತ್ತು ಸಂಸದ ನಳಿನ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ!! ಬಿಜೆಪಿ ಸೋಲಿಗೆ ಕಾರಣ ಆರೋಪ Read More »

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ‌ ಬಂದಿದೆ. ಹಲ್ಲೆಗೊಳಗಾದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಹಲ್ಲೆ ನಡೆಸಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜೆಪಿಯ ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದ್ದು ಹಲ್ಲೆಗೆ ಒಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು Read More »

ಬೆಳಗಾವಿಯಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಪ್ರಕರಣ| ಐವರ ವಿರುದ್ಧ ಕೇಸ್ ಜಡಿದ ಪೊಲೀಸರು

ಸಮಗ್ರ ನ್ಯೂಸ್: ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್ ಗೆಲುವು ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದ್ದು, ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬೆಳಗಾವಿಯ ಆರ್‌ಪಿಡಿ ಕ್ರಾಸ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ವಿಜಯೋತ್ಸವ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಐದಕ್ಕೂ ಹೆಚ್ಚು ಜನರ ವಿರುದ್ಧ ಟಿಳಕವಾಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ನಂತರ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಟಿಳಕವಾಡಿ ಪೊಲೀಸ್ ಠಾಣೆ ಎದುರು ಹನುಮಾನ್

ಬೆಳಗಾವಿಯಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಪ್ರಕರಣ| ಐವರ ವಿರುದ್ಧ ಕೇಸ್ ಜಡಿದ ಪೊಲೀಸರು Read More »

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನು – ಬೆಳ್ಳುಳ್ಳಿ ತಿನ್ನೋದೆಷ್ಟು ಒಳ್ಳೇದು? ಇಲ್ಲಿದೆ ಡೀಟೈಲ್ಸ್…

ಸಮಗ್ರ ನ್ಯೂಸ್: ಇಂದಿನ ಜೀವನ ಶೈಲಿಯಲ್ಲಿ ರೋಗಗಳನ್ನು ನಿಯಂತ್ರಿಸುವುದು ಅತ್ಯಂತ ಸವಾಲಿನ ಕೆಲಸ. ರೋಗಗಳಿಗೆ ದೊಡ್ಡ ಕಾರಣವಾಗಿರೋದು ಇಂದಿನ ಆಹಾರ ಪದ್ಧತಿ. ರೋಗಗಳಿಂದ ದೂರವಿರಲು ಅನೇಕರು ಮನೆಮದ್ದುಗಳನ್ನು ತಯಾರಿಸುತ್ತಾರೆ. ಅಂತಹವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನು ಮತ್ತು ಬೆಳ್ಳುಳ್ಳಿ ತಿನ್ನುವ ಮೂಲಕ ಹಲವಾರು ರೋಗಗಳಿಂದ ಮುಕ್ತಿ ಪಡೆಯಬಹುದು. ಜೇನು-ಬೆಳ್ಳುಳ್ಳಿಳನ್ನು ಪೋಷಕಾಂಶಗಳ ನಿಧಿ ಎಂದು ಕರೆಯಲಾಗುತ್ತದೆ. ಈ ಎರಡೂ ವಸ್ತುಗಳು ಮನೆಗಳಲ್ಲಿ ಸುಲಭವಾಗಿ ಸಿಗುತ್ತದೆ. ಹೆಚ್ಚಿನ ಜನರು ಜೇನುತುಪ್ಪ ಮತ್ತು ಬೆಳ್ಳುಳ್ಳಿಯನ್ನು ವಿವಿಧ ರೀತಿಯಲ್ಲಿ ಸೇವಿಸುತ್ತಾರೆ. ಆದರೆ ಎರಡನ್ನೂ

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನು – ಬೆಳ್ಳುಳ್ಳಿ ತಿನ್ನೋದೆಷ್ಟು ಒಳ್ಳೇದು? ಇಲ್ಲಿದೆ ಡೀಟೈಲ್ಸ್… Read More »

ಸುಳ್ಯ: ದೈವಂಕಟ್ಟು ಮಹೋತ್ಸವಕ್ಕೆ ಸಜ್ಜಾಗಿದೆ ಕೋಲ್ಚಾರು| ಅಂತಿಮ ಹಂತದ ಸಿದ್ದತೆಗಳು ಪೂರ್ಣ| 15 ಸಾವಿರ ಭಕ್ತಾದಿಗಳು ಸೇರುವ ನಿರೀಕ್ಷೆ

ಸಮಗ್ರ ನ್ಯೂಸ್: ಸುಮಾರು 50 ವರ್ಷಗಳ ಬಳಿಕ ಸುಳ್ಯ ತಾಲೂಕಿನ ಕೋಲ್ಚಾರಿನಲ್ಲಿರುವ ಕೋಲ್ಚಾರು ತರವಾಡು ವಯನಾಟ್ ಕುಲವನ್ ದೇವಸ್ಥಾನದಲ್ಲಿ ನಡೆಯಲಿರುವ ದೈವಂಕಟ್ಟು ಮಹೋತ್ಸವಕ್ಕೆ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ. ಸುಮಾರು 15ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಸೇರುವ ಈ ಕಾರ್ಯಕ್ರಮಕ್ಕೆ ಇಡೀ ಕೋಲ್ಚಾರು ಗ್ರಾಮ ಸಜ್ಜಾಗಿದೆ. ಗ್ರಾಮದಲ್ಲಿ ಕೇಸರಿ ರಂಗು ಕಣ್ಮನ ಸೆಳೆಯುತ್ತಿದ್ದು, ಭಕ್ತರನ್ನು ಸ್ವಾಗತಿಸಲು ತಯಾರಾಗಿ ನಿಂತಿದೆ. ಶ್ರೀ ವಯನಾಟ್ ಕುಲವನ್ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳನ್ನು ಅಲಂಕರಿಸಿ ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳು

ಸುಳ್ಯ: ದೈವಂಕಟ್ಟು ಮಹೋತ್ಸವಕ್ಕೆ ಸಜ್ಜಾಗಿದೆ ಕೋಲ್ಚಾರು| ಅಂತಿಮ ಹಂತದ ಸಿದ್ದತೆಗಳು ಪೂರ್ಣ| 15 ಸಾವಿರ ಭಕ್ತಾದಿಗಳು ಸೇರುವ ನಿರೀಕ್ಷೆ Read More »

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವ ಬೆದರಿಕೆ ಹಾಕಿದ ಬಗ್ಗೆ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪಳ್ಳಿ ಗ್ರಾಮದ ವಾಸಿ ಚರಣ್ ಎಂದು ಗುರುತಿಸಲಾಗಿದೆ.ರಿತೇಶ್ ಪಳ್ಳಿಯಲ್ಲಿ ಅಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಮೇ.13 ರಂದು ನಿಂಜೂರಿಗೆ ಬಾಡಿಗೆ ಬಿಟ್ಟು ರಿಕ್ಷಾದಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಪಳ್ಳಿ ಗ್ರಾಮದ ವಾಸಿ ಚರಣ್ ಎಂಬಾತನು ತನ್ನ KA19 MH 3171 ನೋಂದಣಿಯ ಕಾರಿನಲ್ಲಿ ಬಂದು

‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಜೀವಬೆದರಿಕೆ ಹಾಕಿದ ಬಿಜೆಪಿ ಕಾರ್ಯಕರ್ತ Read More »

ಕರ್ನಾಟಕಕ್ಕೆ ನೂತನ ಸಾರಥಿ| ಮೇ.18 ಕ್ಕೆ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ರಾಜ್ಯದ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ನಿಗದಿ ಪಡೆಸಲಾಗಿದ್ದು, ಮೇ 18ರಂದು ಗುರುವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಂಧಿ ಕುಟುಂಬ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆಗಳು ಒಂದು ಅಥವಾ ಎರಡು ದಿನಗಳಲ್ಲಿ ರೂಪುಗೊಳ್ಳಲಿವೆ ಎಂದು

ಕರ್ನಾಟಕಕ್ಕೆ ನೂತನ ಸಾರಥಿ| ಮೇ.18 ಕ್ಕೆ ಪ್ರಮಾಣ ವಚನ ಸ್ವೀಕಾರ Read More »

ಸಿಎಂ ಆಯ್ಕೆ ಪ್ರಕ್ರಿಯೆ ಪ್ರಾರಂಭ|ಮೂವರು ವೀಕ್ಷಕರನ್ನು ನೇಮಿಸಿದ ಮಲ್ಲಿಕಾರ್ಜುನ ಖರ್ಗೆ

Samagra news: ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್‌ನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಇದೀಗ ಪ್ರಕ್ರಿಯೆ ಪ್ರಾರಂಭಗೊಂಡಿವೆ. ಅದರಂತೆ ಮುಂದಿನ ಮುಖ್ಯಮಂತ್ರಿಗಳು ಯಾರು ಆಗುತ್ತಾರೆ ಎನ್ನುವ ಚರ್ಚೆ ಜೋರಾಗುತ್ತಿದ್ದಂತೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕಗೊಳಿಸಿದ್ದಾರೆ. ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ ಮತ್ತು ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ಕರ್ನಾಟಕದಲ್ಲಿ ಸಿಎಲ್‌ಪಿ ನಾಯಕನ

ಸಿಎಂ ಆಯ್ಕೆ ಪ್ರಕ್ರಿಯೆ ಪ್ರಾರಂಭ|ಮೂವರು ವೀಕ್ಷಕರನ್ನು ನೇಮಿಸಿದ ಮಲ್ಲಿಕಾರ್ಜುನ ಖರ್ಗೆ Read More »

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್,

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ Read More »

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನ ಧ್ವಜವಲ್ಲ- ಉ.ಕ ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಹೊನ್ನಾವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಭಟ್ಕಳ ಶಂಶುದ್ದೀನ್ ವೃತ್ತದಲ್ಲಿ ಹಸಿರು, ಕೇಸರಿ ಬಾವುಟ ಹಿಡಿದು ಕಾಂಗ್ರೆಸ್ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆದರೆ ಪಾಕಿಸ್ತಾನ ಧ್ವಜ ಹಾರಿಸಿದ್ದಾರೆ, ಮುಸ್ಲಿಂ ಧ್ವಜ ಹಾರಿಸಿದ್ದಾರೆ ಎಂಬ ವಾಟ್ಸಾಪ್ ಬರಹಗಳು ಎಲ್ಲೆಡೆ ಹರಿದಾಡಿದ್ದವು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ರವರು ಭಟ್ಕಳದಲ್ಲಿ ಹಾರಿಸಲಾದ ಧ್ವಜ ಪಾಕಿಸ್ತಾನದ ಧ್ವಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು ಬಳಸಿದ ಧ್ವಜ ಪಾಕಿಸ್ತಾನದ ಧ್ವಜ

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನ ಧ್ವಜವಲ್ಲ- ಉ.ಕ ಎಸ್ಪಿ ಸ್ಪಷ್ಟನೆ Read More »